ಫಿಕ್ಸಿಡ್ ಡೆಪಾಸಿಟ್ (ಎಫ್‌ಡಿ), ಟರ್ಮ್ ಡೆಪಾಸಿಟ್ ಅಥವಾ ಟೈಮ್ ಡೆಪಾಸಿಟ್ ಎಂದೂ ಕರೆಯಲ್ಪಡುತ್ತದೆ. ಇದು ಹಣವನ್ನು ಹೂಡಿಕೆ ಮಾಡುವ ಸಾಮಾನ್ಯ ಮಾರ್ಗವಾಗಿದೆ. ಹಾಗೆಯೇ ಇದನ್ನು ಕಡಿಮೆ-ಅಪಾಯದ ಹೂಡಿಕೆ ಎಂದು ಪರಿಗಣಿಸಲಾಗುತ್ತದೆ.
ನಿಮ್ಮಲ್ಲಿರುವ ಹಣವನ್ನು ನೀವು ನಿಗದಿತ ಅವಧಿಗಾಗಿ ಉಳಿತಾಯ ಮಾಡಿ ಇಡಲು ಈ ಹಣವು ಸಹಾಯಕವಾಗಿದೆ. ಆಯ್ಕೆಮಾಡಿದ ಅವಧಿಯಲ್ಲಿ ಅಥವಾ ಕೊನೆಯಲ್ಲಿ ನಿಯಮಿತ ಸಮಯದಲ್ಲಿ ನೀವು ಮಾಡಿದ ಹೂಡಿಕೆಯ ಮೇಲೆ ಸ್ಥಿರವಾದ ಬಡ್ಡಿಯನ್ನು ಗಳಿಸಲು ನಿಮಗೆ ಸಾಧ್ಯವಾಗುತ್ತದೆ.

ನಿಮ್ಮ ಹಣವನ್ನು ನೀವು ಎಷ್ಟು ಸಮಯದವರೆಗೆ ಹೂಡಿಕೆ ಮಾಡುತ್ತೀರಿ ಎಂಬುದರ ಆಧಾರದ ಮೇಲೆ ಅನೇಕ ಬ್ಯಾಂಕುಗಳು ಶೇಕಡ 3 ರಿಂದ ಶೇಕಡ 7 ರವರೆಗೆ ಬಡ್ಡಿದರವನ್ನು ನೀಡುತ್ತದೆ. ಹಿರಿಯ ನಾಗರಿಕರು ಕೂಡ ಹೆಚ್ಚುವರಿ ಶೇಕಡ 0.5 ರಷ್ಟು ಬಡ್ಡಿದರವನ್ನು ಪಡೆಯಬಹುದಾಗಿದೆ.
ಆದರೆ ಯಾವುದೇ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಎಫ್‌ಡಿ ದರಗಳನ್ನು ಹೋಲಿಕೆ ಮಾಡಿ ನೋಡುವುದು ಅತೀ ಮುಖ್ಯವಾಗುತ್ತದೆ. ಈ ಲೇಖನದಲ್ಲಿ 2 ಕೋಟಿ ರೂಪಾಯಿಗಿಂತ ಕಡಿಮೆ ಮೊತ್ತದ ಎಫ್‌ಡಿ ಮೇಲೆ ಮುಖ್ಯವಾದ ನಾಲ್ಕು ಬ್ಯಾಂಕ್‌ಗಳ ಎಫ್‌ಡಿ ಬಡ್ಡಿದರದ ಮಾಹಿತಿಯನ್ನು ನೀಡಿದ್ದೇವೆ, ಮುಂದೆ ಓದಿ....
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಫ್‌ಡಿ ಬಡ್ಡಿದರ
ಎರಡು ಕೋಟಿ ರೂಪಾಯಿಗಿಂತ ಕಡಿಮೆ ಮೊತ್ತದ ಎಫ್‌ಡಿ ಮೇಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಾಮಾನ್ಯ ಗ್ರಾಹಕರಿಗೆ ಶೇಕಡ 3 ರಿಂದ ಶೇಕಡ 6.10 ರಷ್ಟು ಬಡ್ಡಿದರವನ್ನು ನೀಡುತ್ತದೆ. ಹಿರಿಯ ನಾಗರಿಕರು ಹೆಚ್ಚುವರಿ 50 ಬೇಸಿಸ್ ಪಾಯಿಂಟ್‌ಗಳನ್ನು (ಬಿಪಿಎಸ್) ಪಡೆಯಬಹುದಾಗಿದೆ.
ಒಂದು ವರ್ಷದಲ್ಲಿ ಮೆಚ್ಯೂರ್ ಆಗುವ ಫಿಕ್ಸಿಡ್ ಡೆಪಾಸಿಟ್‌ಗಳಿಗೆ ಬ್ಯಾಂಕ್ ಶೇಕಡ 6.80 ರಷ್ಟು ಬಡ್ಡಿದರವನ್ನು ನೀಡುತ್ತದೆ. ಹೆಚ್ಚುವರಿಯಾಗಿ, ಎರಡು ವರ್ಷಗಳಿಂದ ಮೂರು ವರ್ಷಗಳಿಗಿಂತ ಕಡಿಮೆ ಅವಧಿಯ ಎಫ್‌ಡಿ ಮೇಲೆ ಶೇಕಡ 7 ರಷ್ಟು ಬಡ್ಡಿದರವನ್ನು ನೀಡುತ್ತದೆ.
ಐಸಿಐಸಿಐ ಬ್ಯಾಂಕ್ ಎಫ್‌ಡಿ ಬಡ್ಡಿದರ
ನವೆಂಬರ್ 16, 2023 ರಂತೆ, ಈ ಬ್ಯಾಂಕ್ ತನ್ನ ಎಫ್‌ಡಿ ಯೋಜನೆಗಳಿಗೆ ಶೇಕಡ 3 ರಿಂದ ಶೇಕಡ 7 ರಷ್ಟು ಬಡ್ಡಿದರಗಳನ್ನು ಪ್ರಸ್ತುತಪಡಿಸುತ್ತದೆ. ಏಕಕಾಲದಲ್ಲಿ, ಹಿರಿಯ ನಾಗರಿಕರು ಹೆಚ್ಚುವರಿ ಶೇಕಡ 0.5 ರಷ್ಟು ಬಡ್ಡಿದರವನ್ನು ಪಡೆಯಬಹುದಾಗಿದೆ.
7 ದಿನಗಳಿಂದ 10 ವರ್ಷಗಳವರೆಗೆ ವಿವಿಧ ಅವಧಿಗಳ ಎಫ್‌ಡಿ ಮೇಲೆ ಶೇಕಡ 3.50 ರಿಂದ ಶೇಕಡ 7.65 ರಷ್ಟು ಬಡ್ಡಿದರ ಪಡೆಯಬಹುದಾಗಿದೆ. ಒಂದು ವರ್ಷದಲ್ಲಿ ಮೆಚ್ಯೂರ್ ಆಗುವ ಡೆಪಾಸಿಟ್‌ಗಳ ಮೇಲೆ ಸಾಮಾನ್ಯ ಗ್ರಾಹಕರಿಗೆ ಶೇಕಡ 6.70 ರಷ್ಟು ಬಡ್ಡಿದರವನ್ನು ನೀಡುತ್ತದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಫ್‌ಡಿ ಬಡ್ಡಿದರ
ನವೆಂಬರ್ 16, 2023 ರಂತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಫ್‌ಡಿ ಮೇಲೆ ಶೇಕಡ 3.50 ರಿಂದ ಶೇಕಡ 7.50 ವರೆಗೆ ಬಡ್ಡಿದರವನ್ನು ನೀಡುತ್ತದೆ. ಒಂದು ವರ್ಷದಲ್ಲಿ ಮೆಚ್ಯೂರ್ ಆಗುವ ಎಫ್‌ಡಿ ಮೇಲೆ ಸಾಮಾನ್ಯ ಹೂಡಿಕೆದಾರರಿಗೆ ಶೇಕಡ 6.75 ಬಡ್ಡಿದರ ನೀಡಲಾಗುತ್ತದೆ. ಆದರೆ ಹಿರಿಯ ನಾಗರಿಕರು ಒಂದು ವರ್ಷದ ಎಫ್‌ಡಿಗೆ ಶೇಕಡ 7.25 ಬಡ್ಡಿದರವನ್ನು ಪಡೆಯಬಹುದಾಗಿದೆ.
ಎಚ್‌ಡಿಎಫ್‌ಸಿ ಬ್ಯಾಂಕ್ ಎಫ್‌ಡಿ ಬಡ್ಡಿದರ
ಎಚ್‌ಡಿಎಫ್‌ಸಿ ಬ್ಯಾಂಕ್ ಒಂದು ವರ್ಷದ ಎಫ್‌ಡಿ ಮೇಲೆ ಆಕರ್ಷಕ ಬಡ್ಡಿದರವನ್ನು ನೀಡುತ್ತದೆ. ಹೂಡಿಕೆದಾರರು ಶೇಕಡ 6.60ರಷ್ಟು ಬಡ್ಡಿದರವನ್ನು ಪಡೆಯಬಹುದಾಗಿದೆ. ಆದರೆ ಹಿರಿಯ ನಾಗರಿಕರು ಎಫ್‌ಡಿ ಮೆಲೆ ಶೇಕಡ 7.10 ರಷ್ಟು ಬಡ್ಡಿಯನ್ನು ಪಡೆಯಬಹುದಾಗಿದೆ. ಮೆಚ್ಯೂರಿಟಿ ಅವಧಿ ಆಧಾರದಲ್ಲಿ ಸಾಮಾನ್ಯ ಗ್ರಾಹಕರಿಗೆ ಶೇಕಡ 3 ರಿಂದ ಶೇಕಡ 7.75 ವರೆಗೆ ಬಡ್ಡಿದರ ನೀಡಲಾಗುತ್ತದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!



Click it and Unblock the Notifications