ಪ್ರಮುಖ ಹಣಕಾಸು ಸಂಸ್ಥೆಯಾದ ಎಚ್ ಡಿಎಫ್ ಸಿ ಮಂಗಳವಾರದಂದು ಸಾಲದ ಮೇಲಿನ ಬಡ್ಡಿ ದರವನ್ನು 15 ಬೇಸಿಸ್ ಪಾಯಿಂಟ್ ಕಡಿಮೆ ಮಾಡಿದೆ. ಅಂದ ಹಾಗೆ ಭಾರತದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಹಲವು ಹಣಕಾಸು ಸಂಸ್ಥೆಗಳು ಸಾಲದ ಮೇಲಿನ ಬಡ್ಡಿದರವನ್ನು ಇಳಿಕೆ ಮಾಡಿದ ನಂತರ ಎಚ್ ಡಿಎಫ್ ಸಿ ಕೂಡ ಆ ಕಡೆಗೆ ಹೆಜ್ಜೆ ಇಟ್ಟಿದೆ.
"ಎಚ್ ಡಿಎಫ್ ಸಿಯಿಂದ ಗೃಹಸಾಲದ ಮೇಲಿನ ರೀಟೇಲ್ ಪ್ರೈಮ್ ಲೆಂಡಿಂಗ್ ರೇಟ್ (RPLR) ಇಳಿಕೆ ಮಾಡಿದೆ. ಅದರ ಆಧಾರದಲ್ಲೇ ಅಡ್ಜಸ್ಟಬಲ್ ರೇಟ್ ಹೋಮ್ ಲೋನ್ಸ್ (ARHL) ನಿರ್ಧಾರ ಆಗುತ್ತದೆ. ಏಪ್ರಿಲ್ 22, 2020ರಿಂದ 15 ಬೇಸಿಸ್ ಪಾಯಿಂಟ್ ಇಳಿಕೆಯಾಗಲಿದೆ" ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಬದಲಾವಣೆಯು ಎಲ್ಲ ರೀಟೇಲ್ ಗೃಹ ಸಾಲ ಗ್ರಾಹಕರಿಗೂ ಅನ್ವಯ ಆಗಲಿದೆ ಎಂದು ತಿಳಿಸಲಾಗಿದೆ.

ಹೊಸ ದರವು 8.05- 8.85 ಪರ್ಸೆಂಟ್ ಇರಲಿದೆ. ಕಳೆದ ಕೆಲವು ತಿಂಗಳಿಂದ ಎಲ್ಲ ಬ್ಯಾಂಕ್ ಗಳ ಸಾಲದ ಮೇಲಿನ ಬಡ್ಡಿ ದರವು ಇಳಿಯುತ್ತಾ ಬಂದಿದೆ. ನಿಧಾನಗತಿಯ ಆರ್ಥಿಕತೆಗೆ ಜೀವ ತುಂಬಲು ಸರ್ಕಾರ ಹಾಗೂ ಆರ್ ಬಿಐ ಸೇರಿ ಈ ಕ್ರಮ ಕೈಗೊಳ್ಳುತ್ತಿದೆ. ಕೊರೊನಾ ಬಿಕ್ಕಟ್ಟು ಉಲ್ಬಣದ ಹಿನ್ನೆಲೆಯಲ್ಲಿ ಆರ್ ಬಿಐ ಕಳೆದ ತಿಂಗಳು 75 ಬೇಸಿಸ್ ಪಾಯಿಂಟ್ಸ್ ಇಳಿಕೆ ಮಾಡಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications