ವಯಸ್ಸಾಗ್ತಾ ಆಗ್ತಾ ಆರೋಗ್ಯದ ಬಗ್ಗೆ ಚಿಂತೆ ಹರಡೋದು ಸಾಮಾನ್ಯವಾಗಿ ಹೋಗಿದೆ. ಮೊದಲೆಲ್ಲ 60ಕ್ಕೆ ಅರಳೋ ಮರಳೋ ಅಂತಿದ್ರು. ಈಗ 30ಕ್ಕೆಲ್ಲ ಕಾಯಿಲೆಗಳು ಶುರುವಾಗ್ತಿವೆ. ಹೀಗಿರುವಾಗ ಹಿರಿಯ ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ತಲೆ ಕೆಡಿಸಿಕೊಳ್ಳೋದು ಬೇಡ್ವಾ?

ಹೌದು, ನಿವೃತ್ತಿ ವಯಸ್ಸು ಹತ್ತಿರ ಬರುತ್ತಿರುವಾಗ ನಿಗದಿತ ಆದಾಯದ ಮೇಲೆಯೇ ಹಿರಿಯ ನಾಗರಿಕರು ಹೆಚ್ಚು ಅವಲಂಬಿತರಾಗಿರುತ್ತಾರೆ. ಹೀಗಿರೋವಾಗ ಆರೋಗ್ಯ ಸಮಸ್ಯೆಗಳು ಅಚಾನಕ್ ಎದುರಾದಾಗ, ಏನು ಮಾಡೋದು? ಕುಟುಂಬಕ್ಕೆ ಆರ್ಥಿಕ ಒತ್ತಡಗಳು ಎದುರಾಗುತ್ತವೆ. ಈ ಪರಿಸ್ಥಿರಿಯನ್ನ ಮನಗಂಡು ಹಿರಿಯರ ಆರೋಗ್ಯ ರಕ್ಷಣೆಗೆ ವಿಶೇಷ ಯೋಜನೆಗಳನ್ನು ರೂಪಿಸೋದು ತುಂಬಾ ಅಗತ್ಯ. ಅದಕ್ಕಾಗಿ ಇರುವುದೇ ಆಯುಷ್ಮಾನ್ ವಯ ವಂದನ ಕಾರ್ಡ್.
ಆಯುಷ್ಮಾನ್ ವಯ ವಂದನ ಕಾರ್ಡ್ ಎಂದರೇನು?
ಹೌದು, ಹಾಗಾದ್ರೆ ಈ ಆಯುಷ್ಮಾನ್ ವಯ ವಂದನ ಕಾರ್ಡ್ ಅಂದ್ರೆ ಏನು ಅಂತೀರಾ? ಇದು ಹಿರಿಯ ನಾಗರಿಕರಿಗಾಗಿಯೇ ಇರುವ ಯೋಜನೆ. ಹಿರಿಯ ನಾಗರಿಕರಿಗೆ ಉಚಿತ ಆಸ್ಪತ್ರೆ ಚಿಕಿತ್ಸೆ ಒದಗಿಸುವ ಆರೋಗ್ಯ ಯೋಜನೆ. ಈ ಯೋಜನೆಯಡಿ 70 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ವೈದ್ಯಕೀಯ ಭದ್ರತೆ ನೀಡಲಾಗುತ್ತೆ. ಈ ಯೋಜನೆಯ ಇನ್ನೊಂದು ವಿಶೇಷತೆ ಏನಂದ್ರೆ, ಆದಾಯದ ಮಟ್ಟವನ್ನು ಪರಿಗಣಿಸದೆ ಎಲ್ಲ ಅರ್ಹ ಹಿರಿಯರು ಇದರ ಪ್ರಯೋಜನ ಪಡೆಯಬಹುದು.
ಯಾರು ಈ ಯೋಜನೆಯ ಪ್ರಯೋಜನ ಪಡೆಯಬಹುದು?
ಇನ್ನು ಈ ಯೋಜನೆಯಲ್ಲಿ ಗಮನವಿಡಬೇಕಾದ ಒಂದು ವಿಷಯ ಏನಂದ್ರೆ, ಇದು 70 ವರ್ಷ ಅಥವಾ ಅದಕ್ಕಿಂತ ಹೆಚ್ಚು ವಯಸ್ಸು ಹೊಂದಿರುವ ಭಾರತೀಯ ನಾಗರಿಕರಿಗೆ ಲಭ್ಯವಾಗಿದೆ. ಅದರಲ್ಲೂ ಆರ್ಥಿಕವಾಗಿ ದುರ್ಬಲರಾಗಿರಲಿ ಅಥವಾ ಸಾಮಾನ್ಯ ಸ್ಥಿತಿಯಲ್ಲಿರಲಿ, ವಯಸ್ಸಿನ ಮಾನದಂಡ ಪೂರೈಸಿದರೆ ಈ ಯೋಜನೆಗೆ ಅರ್ಹರಾಗುತ್ತಾರೆ. ರಾಜ್ಯ ಸರ್ಕಾರದ ನಿಯಮಾನುಸಾರ ನೋಂದಣಿ ಕೇಂದ್ರಗಳಲ್ಲಿ ಅಥವಾ ಆನ್ಲೈನ್ ಮೂಲಕ ಕಾರ್ಡ್ ಪಡೆಯಬಹುದು.
ಯಾವ ಚಿಕಿತ್ಸೆಗಳು ಒಳಗೊಂಡಿವೆ?
ಇನ್ನು ಈ ಆಯುಷ್ಮಾನ್ ವಯ ವಂದನ ಕಾರ್ಡ್‌ನಲ್ಲಿ ಯಾವೆಲ್ಲಾ ಚಿಕಿತ್ಸೆಗಳು ಭರಿಸಬಹುದು ಎಂದು ನೀವು ತಿಳಿಯಿರಿ. ಅದಕ್ಕೂ ಮುನ್ನ ತಿಳಿಯಬೇಕೆಂದರೆ, ಆಸ್ಪತ್ರೆಯಲ್ಲಿ ಇಂತಿಷ್ಟು ನಿಗದಿತ ಮೊತ್ತದವರೆಗೆ ಮಾತ್ರ ಚಿಕಿತ್ಸೆಯನ್ನು ನಗದು ರಹಿತ ಪಡೆಯಬಹುದು ಅನ್ನೋದು. ಇನ್ನು ಈ ಯೋಜನೆಯಲ್ಲಿ ಶಸ್ತ್ರಚಿಕಿತ್ಸೆ, ವಿವಿಧ ವೈದ್ಯಕೀಯ ಪರೀಕ್ಷೆಗಳು, ಔಷಧಿಗಳು, ಆಸ್ಪತ್ರೆಗೆ ದಾಖಲಾಗುವ ಮುನ್ನ ಮತ್ತು ನಂತರದ ಚಿಕಿತ್ಸೆ ವೆಚ್ಚಗಳು ಒಳಗೊಂಡಿರುತ್ತವೆ. ಪಟ್ಟಿ ಮಾಡಲಾದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಲಭ್ಯವಾಗುತ್ತದೆ. ಫಲಾನುಭವಿಗಳು ಮೊದಲು ಹಣ ಪಾವತಿಸುವ ಅಗತ್ಯವಿಲ್ಲ ಎಂಬುದು ಇದರ ಮುಖ್ಯ ವಿಶೇಷತೆ.
ಕುಟುಂಬಗಳಿಗೆ ಇದರ ಮಹತ್ವ:
ವೈದ್ಯಕೀಯ ತುರ್ತು ಪರಿಸ್ಥಿತಿಗಳು ಯಾವಾಗ ಉಂಟಾಗುತ್ತವೆ ಎಂಬುದು ಯಾರಿಗೂ ತಿಳಿದಿಲ್ಲ. ಒಂದು ದೊಡ್ಡ ಚಿಕಿತ್ಸೆಗಾಗಿ ಹೆಚ್ಚಿನ ಹಣ ಬೇಕಾಗಬಹುದು. ಇಂತಹ ಸಂದರ್ಭಗಳಲ್ಲಿ ಈ ಕಾರ್ಡ್ ಕುಟುಂಬಕ್ಕೆ ಆರ್ಥಿಕ ರಕ್ಷಣೆ ಒದಗಿಸುತ್ತದೆ. ಹಿರಿಯ ನಾಗರಿಕರು ಚಿಕಿತ್ಸೆ ಪಡೆಯುವಾಗ ಹಣದ ಚಿಂತೆಯಿಲ್ಲದೆ ಆರೈಕೆ ಪಡೆಯಲು ಇದು ಸಹಕಾರಿಯಾಗಿದೆ.
ಗೌರವಯುತ ವೃದ್ಧಾಪ್ಯಕ್ಕೆ ನೆರವು:
ಆರೋಗ್ಯ ಭದ್ರತೆ ಇರುವುದರಿಂದ ಹಿರಿಯರು ಆತ್ಮವಿಶ್ವಾಸದಿಂದ ಬದುಕಬಹುದು. ಸಮಯಕ್ಕೆ ಸರಿಯಾದ ಚಿಕಿತ್ಸೆ ದೊರಕುವುದು ಅವರ ಜೀವನಮಟ್ಟವನ್ನು ಉತ್ತಮಗೊಳಿಸುತ್ತದೆ. ಸಮಾಜದಲ್ಲಿ ಹಿರಿಯರ ಗೌರವವನ್ನು ಕಾಪಾಡಲು ಹಾಗೂ ಅವರಿಗೆ ಸುರಕ್ಷಿತ ಜೀವನ ಒದಗಿಸಲು ಈ ರೀತಿಯ ಯೋಜನೆಗಳು ಮಹತ್ವದ ಪಾತ್ರ ವಹಿಸುತ್ತವೆ.
(ಹಕ್ಕುತ್ಯಾಗ: ವ್ಯಕ್ತಿಗತ ವಿಶ್ಲೇಷಕರ ಅಥವಾ ಘಟಕಗಳ ಅಭಿಪ್ರಾಯಗಳು ಮತ್ತು ಶಿಫಾರಸುಗಳು ಮಾತ್ರ ಇಲ್ಲಿ ಸೂಚಿಸಲಾಗಿದೆ ಮತ್ತು ಅವು Goodreturns.in ಅಥವಾ Greynium Information Technologies Private Limited (ಒಟ್ಟಿಗೆ "ನಾವು" ಎಂದು ಉಲ್ಲೇಖಿಸಲಾಗಿದೆ) ಅವರ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಯಾವುದೇ ವಿಷಯದ ನಿಖರತೆ, ಪೂರ್ಣತೆ ಅಥವಾ ನಂಬಿಕಾರ್ಹತೆಯನ್ನು ನಾವು ಖಚಿತಪಡಿಸುವುದಿಲ್ಲ, ಸಮರ್ಥಿಸುತ್ತಿಲ್ಲ ಅಥವಾ ಹೊಣೆಗಾರರಲ್ಲ. ನಾವು ಯಾವುದೇ ಹೂಡಿಕೆ ಸಲಹೆ ನೀಡುವುದಿಲ್ಲ ಅಥವಾ_SECURITIES_ ಖರೀದಿ ಅಥವಾ ಮಾರಾಟವನ್ನು ಪ್ರೇರೇಪಿಸುವುದಿಲ್ಲ. ಎಲ್ಲಾ ಮಾಹಿತಿಯು ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ನೀಡಲಾಗಿದ್ದು, ಯಾವುದೇ ಹೂಡಿಕೆ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಲೈಸೆನ್ಸ್ ಪಡೆದ ಹಣಕಾಸು ಸಲಹೆಗಾರರಿಂದ ಸ್ವತಃ ಪರಿಶೀಲಿಸುವುದು ಅಗತ್ಯ.)
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications