ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಕಳೆದ ಒಂದು ವರ್ಷದ ಅವಧಿಯಲ್ಲಿ ಒಟ್ಟಾಗಿ ಆರು ಬಾರಿ ರೆಪೋ ದರವನ್ನು ಏರಿಕೆ ಮಾಡಿದೆ. ಹಣದುಬ್ಬರವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಆರ್‌ಬಿಐ ರೆಪೋ ದರವನ್ನು 6 ಬಾರಿ ಹೆಚ್ಚಳ ಮಾಡಿದೆ. ಅದಾದ ಬಳಿಕ ಎರಡು ಬಾರಿ ಸ್ಥಿರವಾಗಿರಿಸಿದೆ. ರೆಪೋ ದರ ಹೆಚ್ಚಾಗುತ್ತಿದ್ದಂತೆ ಬಡ್ಡಿದರ ಏರಿಸುತ್ತಾ ಬಂದಿರುವ ಬ್ಯಾಂಕುಗಳು ಈಗ ಇಳಿಕೆ ಮಾಡುತ್ತಿದೆ.
ಖಾಸಗಿ ಬ್ಯಾಂಕ್ ಆದ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಶನಿವಾರ ಉಳಿತಾಯ ಖಾತೆಗಳು ಮತ್ತು ಫಿಕ್ಸಿಡ್ ಡೆಪಾಸಿಟ್‌ಗಳ (ಎಫ್‌ಡಿ) ಬಡ್ಡಿದರವನ್ನು ಪರಿಷ್ಕರಣೆ ಮಾಡಿದೆ. ಈ ಪರಿಷ್ಕರಣೆಯ ಬಳಿಕ ಈಗ ಉಳಿತಾಯ ಬ್ಯಾಂಕ್ ಡೆಪಾಸಿಟ್‌ಗಳ ಮೇಲೆ ಶೇಕಡ 7ರಷ್ಟು ಮತ್ತು ಫಿಕ್ಸಿಡ್ ಡೆಪಾಸಿಟ್ ಖಾತೆಗಳ ಮೇಲೆ ಶೇಕಡ 7.50ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. ಐಡಿಎಫ್‌ಸಿ ಫಸ್ಟ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನ ಪ್ರಕಾರ ಹೊಸ ಬಡ್ಡಿದರಗಳು ಜುಲೈ 1ರಿಂದ ಜಾರಿಗೆ ಬರಲಿದೆ. ನೂತನ ಬಡ್ಡಿದರದ ವಿವರ ಇಲ್ಲಿದೆ ಮಾಹಿತಿ ಮುಂದೆ ಓದಿ....

ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಉಳಿತಾಯ ಖಾತೆ ಬಡ್ಡಿದರ
ಐಡಿಎಫ್‌ಸಿ ಫಸ್ಟ್ ಬ್ಯಾಂಕ್‌ನಲ್ಲಿ 10 ಲಕ್ಷ ರೂಪಾಯಿವರೆಗಿನ ಉಳಿತಾಯ ಖಾತೆಯ ಬ್ಯಾಲೆನ್ಸ್‌ಗೆ ಶೇಕಡ 4.00ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. 10 ಲಕ್ಷ ರೂಪಾಯಿಯಿಂದ 5 ಕೋಟಿ ರೂಪಾಯಿವರೆಗಿನ ಉಳಿತಾಯ ಬ್ಯಾಂಕ್ ಡೆಪಾಸಿಟ್‌ಗಳ ಮೇಲೆ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಶೇಕಡ 7ರಷ್ಟು ಬಡ್ಡಿದರವನ್ನು ನೀಡುತ್ತದೆ.
ಐಡಿಎಫ್‌ಸಿ ಫಸ್ಟ್ ಬ್ಯಾಂಕ್ 5 ಕೋಟಿ ರೂಪಾಯಿಯಿಂದ 50 ಕೋಟಿ ರೂಪಾಯಿವರೆಗಿನ ಉಳಿತಾಯ ಖಾತೆಯ ಬ್ಯಾಲೆನ್ಸ್‌ನಲ್ಲಿ ಶೇಕಡ 6.75ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. 50 ಕೋಟಿ ರೂಪಾಯಿಯಿಂದ 100 ಕೋಟಿ ರೂಪಾಯಿವರೆಗನ ಉಳಿತಾಯ ಖಾತೆಯ ಬ್ಯಾಲೆನ್ಸ್‌ಗೆ ಶೇಕಡ 5.00ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ.
ಐಡಿಎಫ್‌ಸಿ ಫಸ್ಟ್ ಬ್ಯಾಂಕ್‌ನಲ್ಲಿ ನಿಮ್ಮ ಖಾತೆಯ ಮೊತ್ತ 100 ಕೋಟಿ ರೂಪಾಯಿಯಿಂದ 200 ಕೋಟಿ ರೂಪಾಯಿ ಆಗಿದ್ದರೆ, ನಿಮಗೆ ಶೇಕಡ 4.50ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. ಬ್ಯಾಂಕ್‌ನಲ್ಲಿ ನಿಮ್ಮ ಉಳಿತಾಯ ಖಾತೆಯ ಬ್ಯಾಲೆನ್ಸ್ 200 ಕೋಟಿ ರೂಪಾಯಿ ಆಗಿದ್ದರೆ, ಶೇಕಡ 3.50ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ.
ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಎಫ್‌ಡಿ ಬಡ್ಡಿದರ
7 ರಿಂದ 29 ದಿನಗಳಲ್ಲಿ ಮೆಚ್ಯೂರಿಟಿ ಆಗುವ ಫಿಕ್ಸಿಡ್ ಡೆಪಾಸಿಟ್‌ಗಳ ಮೇಲೆ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಶೇಕಡ 3.50ರಷ್ಟು ಬಡ್ಡಿದರವನ್ನು ನೀಡುತ್ತದೆ. ಇನ್ನು 30ರಿಂದ 45 ಅವಧಿಗಳಲ್ಲಿ ಮೆಚ್ಯೂರಿಟಿ ಹೊಂದುವ ಫಿಕ್ಸಿಡ್ ಡೆಪಾಸಿಟ್ ಮೇಲೆ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಶೇಕಡ 4ರಷ್ಟು ಬಡ್ಡಿದರವನ್ನು ನೀಡುತ್ತದೆ.
ಇನ್ನು 46 ದಿನದಲ್ಲಿ 90 ದಿನಗಳ ಅವಧಿಯಲ್ಲಿ ಮೆಚ್ಯೂರಿಟಿ ಹೊಂದುವ ಫಿಕ್ಸಿಡ್ ಡೆಪಾಸಿಟ್ ಮೇಲೆ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಶೇಕಡ 4.50ರಷ್ಟು ಬಡ್ಡಿದರವನ್ನು ನೀಡುತ್ತದೆ. 91 ದಿನದಿಂದ 180 ದಿನಗಳ ಎಫ್‌ಡಿ ಮೇಲೆ ಶೇಕಡ 5ರಷ್ಟು ಬಡ್ಡಿದರವನ್ನು ಈ ಬ್ಯಾಂಕ್ ನೀಡುತ್ತದೆ. ಇನ್ನು 181 ದಿನಗಳಿಂದ 1 ವರ್ಷಗಳ ಅವಧಿಯ ಫಿಕ್ಸಿಡ್ ಡೆಪಾಸಿಟ್‌ಗಳ ಮೇಲೆ ಬ್ಯಾಂಕ್ ಶೇಕಡ 6.50ರಷ್ಟು ಬಡ್ಡಿದರವನ್ನು ನೀಡುತ್ತದೆ.
ಒಂದು ವರ್ಷ ಒಂದು ದಿನದಿಂದ 550 ದಿನಗಳ ಅವಧಿಯ ಫಿಕ್ಸಿಡ್ ಡೆಪಾಸಿಟ್‌ಗಳ ಮೇಲೆ ಶೇಕಡ 7.50ರಷ್ಟು ಬಡ್ಡಿದರವನ್ನು ನೀಡುತ್ತದೆ. 551 ದಿನಗಳಿಂದ 3 ವರ್ಷಗಳ ಅವಧಿಯ ಫಿಕ್ಸಿಡ್ ಡೆಪಾಸಿಟ್ ಮೇಲೆ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಶೇಕಡ 7.25ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. 3 ವರ್ಷ 1 ದಿನದಿಂದ 10 ವರ್ಷಗಳ ಅವಧಿಯಲ್ಲಿ ಮೆಚ್ಯೂರಿಟಿ ಹೊಂದುವ ಎಫ್‌ಡಿ ಮೇಲೆ ಬ್ಯಾಂಕ್ ಶೇಕಡ 7ರಷ್ಟು ಬಡ್ಡಿದರವನ್ನು ನೀಡುತ್ತದೆ. ಇನ್ನು ಹಿರಿಯ ನಾಗರಿಕರಿಗೆ ಶೇಖಡ 0.50ರಷ್ಟು ಅಧಿಕ ಬಡ್ಡಿದರವನ್ನು ಬ್ಯಾಂಕ್ ನೀಡುತ್ತದೆ.


Click it and Unblock the Notifications