ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಆಕಾಂಕ್ಷಿಗಳಿಗೆ ಇಲ್ಲೊಂದು ಸಿಹಿಸುದ್ದಿಯಿದೆ. ಉತ್ತರ ರೈಲ್ವೆಯ ರೈಲ್ವೇ ನೇಮಕಾತಿ ವಿಭಾಗ ಅಪ್ರೆಂಟಿಸ್ ಕಾಯಿದೆ 1961 ರ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 3093 ಅಪ್ರೆಂಟಿಸ್‌ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತರ ರೈಲ್ವೆಯ ವಿವಿಧ ವಿಭಾಗಗಳು/ಘಟಕಗಳು/ ಕಾರ್ಯಾಗಾರಗಳಲ್ಲಿ ತರಬೇತಿ ನೀಡಲಾಗುತ್ತದೆ. ಈ ನೇಮಕಾತಿ ಪ್ರಕ್ರಿಯೆಗೆ ಡಿಸೆಂಬರ್ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಜನವರಿ 11ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಕೆ, ಅರ್ಹತೆ ಇತರೆ ವಿವರ ಇಲ್ಲಿದೆ ಮುಂದೆ ಓದಿ....

ಅರ್ಹತೆಯ ಮಾನದಂಡ
ಹುದ್ದೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಎಸ್‌ಎಸ್‌ಸಿ/ ಮೆಟ್ರಿಕ್ಯುಲೇಷನ್/ 10ನೇ ತರಗತಿ ಅಥವಾ 10+2 (ದ್ವೀತೀಯ ಪಿಯುಸಿ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮಾನ್ಯತೆ ಪಡೆದ ಮಂಡಳಿಯಿಂದ ಒಟ್ಟಾರೆಯಾಗಿ ಕನಿಷ್ಠ ಶೇಕಡ 50 ರಷ್ಟು ಅಂಕಿಯೊಂದಿಗೆ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಎನ್‌ಸಿವಿಟಿ/ ಎಸ್‌ಸಿವಿಟಿ ನೀಡಿದ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಉತ್ತೀರ್ಣರಾಗಿರಬೇಕು.
ವಯಸ್ಸಿನ ಮಿತಿ
ಅಭ್ಯರ್ಥಿಗಳು 18 ವರ್ಷಗಳನ್ನು ಪೂರ್ಣಗೊಳಿಸಿರಬೇಕು. 11.01.2024 ಕ್ಕೆ 24 ವರ್ಷಗಳನ್ನು ಪೂರ್ಣಗೊಳಿಸಿರಬಾರದು. ಆದಾಗ್ಯೂ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 3 ವರ್ಷ ವಿನಾಯಿತಿ ನೀಡಲಾಗುತ್ತದೆ. ವಿಕಲಾಂಗರಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು 10 ವರ್ಷಗಳಿಗೆ ಸಡಿಲಿಕೆ ಮಾಡಲಾಗಿದೆ.
ಹೇಗೆ ಅರ್ಜಿ ಸಲ್ಲಿಸುವುದು?
ಹಂತ 1: https://rrcnr.org/ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
ಹಂತ 2: Engagement of Act Apprentice ಆನ್‌ಲೈನ್ ಅಪ್ಲಿಕೇಶನ್ ಅನ್ನು ನಮೂದಿಸುವ ಲಿಂಕ್ ಅನ್ನು ಕ್ಲಿಕ್ ಮಾಡಿ
ಹಂತ 3: ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಒದಗಿಸಿ ರಿಜಿಸ್ಟಾರ್ ಮಾಡಿಕೊಳ್ಳಿ.
ಹಂತ 4: ಯಶಸ್ವಿ ನೋಂದಣಿಯ ನಂತರ, ಅಭ್ಯರ್ಥಿಗಳಿಗೆ ಲಾಗಿನ್ ಮಾಡಲು ಪಾಸ್‌ವರ್ಡ್ ನೀಡಲಾಗುತ್ತದೆ.
ಹಂತ 5: ನಿಮ್ಮ ಲಾಗಿನ್ ಐಡಿ ಬಳಸಿಕೊಂಡು ಲಾಗಿನ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಹೊಂದಿರುವ ಅಭ್ಯರ್ಥಿ ಡ್ಯಾಶ್‌ಬೋರ್ಡ್, ಆನ್‌ಲೈನ್ ಶುಲ್ಕ ಪಾವತಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ. ಅರ್ಜಿಯನ್ನು ಭರ್ತಿ ಮಾಡಿ.
ಹಂತ 6: ಅರ್ಜಿಯನ್ನು Submit ಮಾಡಿ, ಪ್ರಿಂಟ್ ಔಟ್ ಅನ್ನು ಇಟ್ಟುಕೊಳ್ಳಿ.
ಅರ್ಜಿ ಶುಲ್ಕ
ಅಭ್ಯರ್ಥಿಗಳು 100 ರೂಪಾಯಿ ಆನ್‌ಲೈನ್ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಬಿಡಿ/ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications