ಹೂಡಿಕೆ ಮಾಡುವಾಗ ಎಂದಿಗೂ ಕೂಡಾ ನಾವು ಎಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭವನ್ನು ಗಳಿಸಬಹುದು ಎಂದು ನೋಡುತ್ತೇವೆ. ಈ ಎಲ್ಲ ವಿಚಾರಕ್ಕೆ ಬಂದಾದ ನಮಗೆ ಫಿಕ್ಸಿಡ್ ಡೆಪಾಸಿಟ್ (ಎಫ್‌ಡಿ) ಉತ್ತಮ ಆಯ್ಕೆಯಾಗಿರುತ್ತದೆ. ಸುರಕ್ಷತೆ ಕೂಡಾ ಇದರಲ್ಲಿ ಇರುತ್ತದೆ. ಈ ಒಂದು ಬ್ಯಾಂಕ್ ಎಫ್‌ಡಿ ಮೇಲೆ ಸಾಮಾನ್ಯ ಬ್ಯಾಂಕ್‌ಗಿಂತ ಅಧಿಕ ಬಡ್ಡಿದರವನ್ನು ನೀಡುತ್ತದೆ. ಅದು ಕೂಡಾ ಶೇಕಡ 9ರಷ್ಟು ಬಡ್ಡಿದರ.
ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಫಿಕ್ಸಿಡ್ ಡೆಪಾಸಿಟ್ (ಎಫ್‌ಡಿ) ಬಡ್ಡಿದರವನ್ನು ಪರಿಷ್ಕರಣೆ ಮಾಡಿದೆ. ನೂತನ ಬಡ್ಡಿದರವು ಮೇ 30, 2023ರಿಂದ ಜಾರಿಗೆ ಬರುತ್ತದೆ ಎಂದು ಬ್ಯಾಂಕ್ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ 2 ಕೋಟಿ ರೂಪಾಯಿಯ ಎಫ್‌ಡಿ ಬಡ್ಡಿದರವನ್ನು ಪರಿಷ್ಕರಣೆ ಮಾಡಿದೆ.

ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಬಡ್ಡಿದರ ಎಷ್ಟಿದೆ ನೋಡಿ
ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ತನ್ನ ಫಿಕ್ಸಿಡ್ ಡೆಪಾಸಿಟ್ (ಎಫ್‌ಡಿ) ಬಡ್ಡಿದರವನ್ನು ಪರಿಷ್ಕರಣೆ ಮಾಡಿದೆ. ಬ್ಯಾಂಕ್ ಈಗ ಸಾಮಾನ್ಯ ನಾಗರಿಕರಿಗೆ 7ರಿಂದ 14 ದಿನಗಳ ಅವಧಿಯ ಎಫ್‌ಡಿ ಮೇಲೆ ಕನಿಷ್ಠ ಶೇಕಡ 3.75ರಷ್ಟು ಬಡ್ಡಿದರವನ್ನು ನೀಡುತ್ತದೆ. ಹಿರಿಯ ನಾಗರಿಕರಿಗೆ ಬ್ಯಾಂಕ್ ಅದೇ ಅವಧಿಯ ಎಫ್‌ಡಿ ಮೇಲೆ ಶೇಕಡ 4.25ರಷ್ಟು ಬಡ್ಡಿದರ ನೀಡುತ್ತದೆ.
ಇನ್ನು 61-90 ಅವಧಿಯ ಫಿಕ್ಸಿಡ್ ಡೆಪಾಸಿಟ್ ಮೇಲೆ ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಸಾಮಾನ್ಯ ನಾಗರಿಕರಿಗೆ ಶೇಕಡ 5ರಷ್ಟು ಬಡ್ಡಿದರ ನೀಡುತ್ತದೆ. ಇನ್ನು ಹಿರಿಯ ನಾಗರಿಕರಿಗೆ ಈ ಬ್ಯಾಂಕ್ ಅದೇ ಅವಧಿಯ ಎಫ್‌ಡಿ ಮೇಲೆ ಶೇಕಡ 5.50ರಷ್ಟು ಬಡ್ಡಿದರವನ್ನು ನೀಡುತ್ತದೆ.
91ರಿಂದ 180ರ ಅವಧಿಯ ಎಫ್‌ಡಿ ಮೆಲೆ ಸಾಮಾನ್ಯ ನಾಗರಿಕರಿಗೆ ಶೇಕಡ 6.25ರಷ್ಟು ಬಡ್ಡಿದರವನ್ನು ನೀಡುತ್ತದೆ. ಹಿರಿಯ ನಾಗರಿಕರಿಗೆ ಶೇಕಡ 6.75ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. ಇನ್ನು 181 ದಿನದಿಂದ 364 ದಿನಗಳ ಅವಧಿಯ ಎಫ್‌ಡಿ ಮೇಲೆ ಸಾಮಾನ್ಯ ನಾಗರಿಕರಿಗೆ ಶೇಕಡ 7.00ರಷ್ಟು ಬಡ್ಡಿದರ, ಹಿರಿಯ ನಾಗರಿಕರಿಗೆ ಶೇಕಡ 7.50ರಷ್ಟು ಬಡ್ಡಿದರ ನೀಡಲಾಗುತ್ತದೆ.
ಇನ್ನು 366 ದಿನದಿಂದ 499 ದಿನಗಳ ಅವಧಿಯ ಎಫ್‌ಡಿ ಮತ್ತು 501 ದಿನದಿಂದ 2 ವರ್ಷಗಳ ಎಫ್‌ಡಿ ಮೇಲೆ ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಅಧಿಕ ಬಡ್ಡಿದರವನ್ನು ನೀಡುತ್ತದೆ. ಈ ಅವಧಿಯ ಎಫ್‌ಡಿ ಮೇಲೆ ಸಾಮಾನ್ಯ ನಾಗರಿಕರಿಗೆ ಶೇಕಡ 8.50ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. ಇನ್ನು ಹಿರಿಯ ನಾಗರಿಕರಿಗೆ ಶೇಕಡ 9.00ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ.
5 ವರ್ಷದಿಂದ 10 ವರ್ಷಗಳ ಅವಧಿಯ ಫಿಕ್ಸಿಡ್ ಡೆಪಾಸಿಟ್ (ಎಫ್‌ಡಿ) ಮೇಲೆ ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಶೇಕಡ 6.00ರಷ್ಟು ಬಡ್ಡಿದರವನ್ನು ನಿಡುತ್ತದೆ. ಅದುವೇ ಹಿರಿಯ ನಾಗರಿಕರಿಗೆ ಅದೇ ಅವಧಿಯ ಎಫ್‌ಡಿ ಮೇಲೆ ಬ್ಯಾಂಕ್ ಶೇಕಡ 6.50ರಷ್ಟು ಬಡ್ಡಿದರವನ್ನು ನೀಡುತ್ತದೆ.
ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ (ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್) ಮಾರ್ಚ್ 31, 2020 ರಂತೆ ನಿರ್ವಹಣೆ ಮತ್ತು ಠೇವಣಿ ಗಾತ್ರದ ಅಡಿಯಲ್ಲಿ ಸ್ವತ್ತುಗಳ ವಿಷಯದಲ್ಲಿ ಭಾರತದ ಪ್ರಮುಖ ಸಣ್ಣ ಹಣಕಾಸು ಬ್ಯಾಂಕ್‌ಗಳಲ್ಲಿ ಒಂದಾಗಿದೆ. ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮಾರ್ಚ್ 31, 2020 ರಂತೆ ಭಾರತದ ಎಲ್ಲಾ ಸಣ್ಣ ಹಣಕಾಸು ಬ್ಯಾಂಕ್‌ಗಳಲ್ಲಿ ಎರಡನೇ ಅತ್ಯಂತ ಭೌಗೋಳಿಕವಾಗಿ ವೈವಿಧ್ಯಮಯ ಪೋರ್ಟ್‌ಫೋಲಿಯೊವನ್ನು ಹೊಂದಿದೆ.
ಫೆಬ್ರವರಿ 28, 2021 ರಂತೆ, ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಅಧಿಕೃತ ವೆಬ್‌ಸೈಟ್ ಪ್ರಕಾರ, ಬ್ಯಾಂಕ್ ಗ್ರಾಮೀಣ ಕೇಂದ್ರಗಳಲ್ಲಿ 166 ಶಾಖೆಗಳು ಮತ್ತು 19 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ 229 ಜಿಲ್ಲೆಗಳಲ್ಲಿ 134 ಎಟಿಎಂಗಳನ್ನು ಹೊಂದಿದೆ. ಹಾಗೆಯೇ 611 ಶಾಖೆಗಳನ್ನು ಹೊಂದಿದೆ.


Click it and Unblock the Notifications