ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ 2023-2024ನೇ ಹಣಕಾಸು ವರ್ಷದ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಬಜೆಟ್ ಮಂಡನೆ ವೇಳೆ ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಕರ್ನಾಟಕದಲ್ಲಿ 7ನೇ ವೇತನ ಆಯೋಗವನ್ನು ಜಾರಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಲವಾರು ರಾಜ್ಯಗಳಲ್ಲಿ 7ನೇ ವೇತನ ಆಯೋಗವನ್ನು ಜಾರಿ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಈವರೆಗೂ 7ನೇ ವೇತನ ಆಯೋಗವನ್ನು ಜಾರಿ ಮಾಡಲಾಗಿಲ್ಲ. ಆದರೆ ಈಗ ಸರ್ಕಾರವು ಶೀಘ್ರವೇ 7ನೇ ವೇತನ ಆಯೋಗವನ್ನು ಜಾರಿ ಮಾಡುವ ನಿರ್ಧಾರ ಮಾಡಿದೆ. ಇದಕ್ಕಾಗಿ ಸುಮಾರು 6,000 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ರಾಜ್ಯದ ಹಣಕಾಸು ಖಾತೆಯನ್ನು ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ರಾಜ್ಯದಲ್ಲಿ ಶೀಘ್ರವೇ 7ನೇ ವೇತನ ಆಯೋಗವನ್ನು ಜಾರಿ ಮಾಡಲಾಗುತ್ತದೆ. ಮಾಜಿ ಮುಖ್ಯ ಕಾರ್ಯದರ್ಶು ಸುಧಾಕರ್ ರಾವ್ ನೇತೃತ್ವದ ಸಮಿತಿಯು 7ನೇ ವೇತನ ಆಯೋಗದ ವರದಿಯನ್ನು ನೀಡಲಿದೆ. ಕರ್ನಾಟಕ ಸರ್ಕಾರಿ ನೌಕರರ ವೇತನ ಹೆಚ್ಚಳದ ಬಗ್ಗೆ ವರದಿಯಲ್ಲಿ ವಿವರಣೆ ನೀಡಲಿದ್ದಾರೆ," ಎಂದು ತಿಳಿಸಿದ್ದಾರೆ.

ಬಜೆಟ್ ಮಂಡನೆ ವೇಳೆ ಘೋಷಿಸಿದ ಮುಖ್ಯಮಂತ್ರಿ
ಹಣಕಾಸು ವರ್ಷ 2023-2024ನೇ ಕರ್ನಾಟಕ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಳಿಕ 7ನೇ ವೇತನ ಆಯೋಗವನ್ನು ಜಾರಿ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಹಾಗೆಯೇ ಇದಕ್ಕಾಗಿ ತಗುಲುವ ವೆಚ್ಚವನ್ನು ಕೂಡಾ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಸಮಿತಿಯು ವರದಿಯನ್ನು ಕೂಡಾ ನೀಡಲಿದೆ ಎಂದು ತಿಳಿಸಿದ್ದಾರೆ.
"ಸಮಿತಿಯು ತನ್ನ ಕೊನೆಯ ಅಥವಾ ಮಧ್ಯಂತರ ವರದಿಯನ್ನು ಸಲ್ಲಿಸಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರವು ಶೀಘ್ರವೇ ಕ್ರಮಕೈಗೊಳ್ಳಲಿದೆ. ಬಜೆಟ್‌ನಲ್ಲಿ ಇದಕ್ಕಾಗಿ ಮೊತ್ತವನ್ನು ಕೂಡಾ ನಿಗದಿಪಡಿಸಲಾಗುತ್ತದೆ. 7ನೇ ವೇತನ ಆಯೋಗದ ಜಾರಿಗೆ ಯಾವುದೇ ಸಮಸ್ಯೆಯಿಲ್ಲ," ಎಂದು ಹೇಳಿದ್ದಾರೆ.
ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆ
ಕೇಂದ್ರ ಸರ್ಕಾರಿ ನೌಕರರು ತುಟ್ಟಿಭತ್ಯೆ ಏರಿಕೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಕೇಂದ್ರ ಸರ್ಕಾರವು 7ನೇ ವೇತನ ಆಯೋಗದಡಿಯಲ್ಲಿ ತುಟ್ಟಿಭತ್ಯೆಯನ್ನು ಏರಿಕೆ ಮಾಡುವ ಸಾಧ್ಯತೆಯಿದೆ. ಒಂದು ಕೋಟಿ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಶೇಕಡ 4ರಷ್ಟು ಹೆಚ್ಚಳ ಮಾಡುವ ನಿರೀಕ್ಷೆಯಿದೆ. ಈ ನಡುವೆ ಪಶ್ಚಿಮ ಬಂಗಾಳ ಸರ್ಕಾರದ ಸಚಿವೆವವ ಚಂದ್ರಿಮಾ ಭಟ್ಟಾಚಾರ್ಯ ತುಟ್ಟಿಭತ್ಯೆ ಏರಿಕೆ ಮಾಡಲಾಗುವ ಘೋಷಣೆ ಮಾಡು ನಿರ್ಧಾರ ಮಾಡಿದೆ.
ಈ ಹಿಂದೆ ಪಶ್ಚಿಮ ಬಂಗಾಳ ಸರ್ಕಾರವು ಕೂಡಾ ಬಜೆಟ್ ಸಂದರ್ಭದಲ್ಲಿ 7ನೇ ವೇತನ ಆಯೋಗ ಕುರಿತಾದ ಘೋಷಣೆಯನ್ನು ಮಾಡಿದೆ. ಪಶ್ಚಿಮ ಬಂಗಾಳ ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಬುಧವಾರ ಹಣಕಾಸು ವರ್ಷ 2023-24ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ನವೆಂಬರ್ 2022ರಲ್ಲಿ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಿ ನೌಕರರು ಪಶ್ಚಿಮ ಬಂಗಾಳ ವಿಧಾನಸಭೆಯ ಹೊರಗೆ ಪ್ರತಿಭಟನೆ ಮಾಡಿದ್ದಾರೆ. ಡಿಎ ಏರಿಕೆ ಮಾಡುವ ಆಗ್ರಹವನ್ನು ಸರ್ಕಾರಿ ನೌಕರರು ಮಾಡಿದ್ದಾರೆ. ಇದಾದ ಕೆಲವೇ ತಿಂಗಳುಗಳಲ್ಲಿ ಸರ್ಕಾರಿ ನೌಕರರು ಈ ನಿರ್ಧಾರವನ್ನು ಮಾಡಿದ್ದಾರೆ.


Click it and Unblock the Notifications