ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ. 2024ರ ಲೋಕ ಸಭೆಗೂ ಮುನ್ನ ಬರುವ ಬಜೆಟ್ ಇದಾಗಿದೆ. ಅಂದರೆ ಕೇಂದ್ರ ಸರ್ಕಾರದ ಈ ಆಡಳಿತಾವಧಿಯ ಕೊನೆಯ ಬಜೆಟ್ ಇದಾಗಿದೆ. ಅದರಿಂದಾಗಿ ಸಾಮಾನ್ಯವಾಗಿಯೇ ಬಜೆಟ್ ಮೇಲಿನ ನಿರೀಕ್ಷೆಗಳು ಹೆಚ್ಚಾಗಿದೆ.
ಈಗಾಗಲೇ ಹಲವಾರು ವಲಯಗಳು ಕೇಂದ್ರ ಬಜೆಟ್ ಮೇಲಿನ ನಿರೀಕ್ಷೆಯನ್ನು ತಿಳಿಸಿದ್ದಾರೆ. ಹಾಗೆಯೇ ತಮ್ಮ ಬೇಡಿಕೆಗಳನ್ನು ಕೂಡಾ ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ. ಹಾಗೆಯೇ ಬೇರೆ ಬೇರೆ ರಾಜ್ಯಗಳು ಕೂಡಾ ಕೇಂದ್ರ ಬಜೆಟ್‌ನಿಂದ ಹಲವಾರು ನಿರೀಕ್ಷೆಗಳನ್ನು ಹೊಂದಿದೆ. ಕರ್ನಾಟಕ ರಾಜ್ಯವು ಕೂಡಾ ಹಲವಾರು ನಿರೀಕ್ಷೆಗಳನ್ನು ಹೊಂದಿದೆ.
ಹಣಕಾಸು ಖಾತೆಯನ್ನು ಕೂಡಾ ಹೊಂದಿರುವ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರಿಗೆ ಕೇಂದ್ರ ಬಜೆಟ್‌ನಿಂದ ಕರ್ನಾಟಕ ರಾಜ್ಯ ಸರ್ಕಾರದ ನಿರೀಕ್ಷೆಗಳು ಏನಿದೆ ಎಂಬ ಪಟ್ಟಿಯನ್ನು ಕಳುಹಿಸಿದ್ದಾರೆ ಎಂದು ಹಣಕಾಸು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಾಗಾದರೆ ಚುನಾವಣೆಗೂ ಮುನ್ನ ಬರುವ ಬಜೆಟ್ ಮೇಲೆ ಕೇಂದ್ರ ಸರ್ಕಾರದ ನಿರೀಕ್ಷೆಗಳೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ...
ಕರ್ನಾಟಕಕ್ಕೆ ಉತ್ತಮ ಕೊಡುಗೆ ಸಾಧ್ಯತೆ
ಏಪ್ರಿಲ್-ಮೇ ತಿಂಗಳಿನಲ್ಲಿ ಕರ್ನಾಟಕ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಉತ್ತಮ ಕೊಡುಗೆಯನ್ನು ನೀಡುವ ಮೂಲಕ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಸಜ್ಜಾಗಿದೆ. ಕೇಂದ್ರ ನಾಯಕತ್ವವು ಚುನಾವಣೆ ನಡೆಯುವ ಬೇರೆ ಬೇರೆ ರಾಜ್ಯಗಳಲ್ಲಿ ಗುಜರಾತ್ ಮಾದರಿಯನ್ನು ಅಳವಡಿಸಲು ಸಜ್ಜಾಗಿದೆ. "ಬೆಳವಣಿಗೆ ಆಧಾರದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯವನ್ನು ಅತೀ ಮುಖ್ಯ ರಾಜ್ಯ ಎಂದು ಪರಿಗಣಿಸಿದೆ. ಅದರಿಂದಾಗಿ ಕರ್ನಾಟಕವು ಡಬಲ್ ಇಂಜಿನ್ ಸರ್ಕಾರದಿಂದ ಪ್ರಯೋಜನವನ್ನು ಪಡೆಯಲಿದೆ," ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ನಿರೀಕ್ಷೆಗಳು
ವರದಿಗಳ ಪ್ರಕಾರ ಕರ್ನಾಟಕದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಯೋಜನೆಗಳನ್ನು ಜಾರಿಗೊಳಿಸಲು ಮತ್ತು ನಿಧಿಯನ್ನು ಹಂಚಿಕೆ ಮಾಡಲು ಕೇಂದ್ರ ಸರ್ಕಾರವು ಸಿದ್ಧತೆ ನಡೆಸುತ್ತಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನ ಮೇಲೆ ಹೆಚ್ಚಿನ ಆಧ್ಯತೆ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರು ವಾಣಿಜ್ಯ ಬೆಳವಣಿಗೆಯನ್ನು ಕಾಣುತ್ತಿರುವ ಪ್ರಮುಖ ನಗರವಾದ ಕಾರಣ ಕೇಂದ್ರ ಸರ್ಕಾರವು ಬೆಂಗಳೂರಿಗೆ ಅಧಿಕ ಒತ್ತು ನೀಡಲಿದೆ. ಗುಜರಾತ್, ಉತ್ತರ ಪ್ರದೇಶ, ರಾಜಸ್ಥಾನ, ತಮಿಳುನಾಡಿಗೆ ಫಿನ್‌ಟೆಕ್ ಸಿಟಿ ಯೋಜನೆಗಳನ್ನು ಜಾರಿ ಮಾಡಿದಂತೆ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೂ ಯೋಜನೆಗಳನ್ನು ಜಾರಿಗೊಳಿಸುವ ನಿರೀಕ್ಷೆಯಿದೆ. ನೆಲಮಂಗಲ, ಹೊಸಕೋಟೆ, ದೊಡ್ಡ ಬಳ್ಳಾಪುರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅಭಿವೃದ್ಧಿ ಯೋಜನೆ ಜಾರಿ ಮಾಡುವ ನಿರೀಕ್ಷೆಯಿದೆ. ಪ್ರಸ್ತುತ ಹಲವಾರು ನಗರಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ನಗರಗಳಲ್ಲಿ ಪಟ್ಟಿ ಹೆಚ್ಚಿಸುವ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಹೊಂದಿದೆ.
ರಾಜ್ಯ ಸರ್ಕಾರದ ಬಜೆಟ್
ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾದರೆ, ಫೆಬ್ರವರಿ 17ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಚುನಾವಣೆಗೂ ಮುನ್ನ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಚುನಾವಣಾ ತಂತ್ರವಾಗಿ ಬಳಸುವ ಸಾಧ್ಯತೆಯಿದೆ. ಪ್ರಮುಖವಾಗಿ ಕೃಷಿ ಮತ್ತು ನೀರಾವರಿ ವಲಯಕ್ಕೆ ಹೆಚ್ಚಿನ ಆಧ್ಯತೆ ನೀಡುವ ನಿರೀಕ್ಷೆಯಿದೆ. ಜಲ ಯೋಜನೆಗಳು ರಾಜ್ಯ ಸರ್ಕಾರದ ಪಟ್ಟಿಯಲ್ಲಿದೆ. ಕಳಸ ಬಂಡೂರಿ, ಮೇಕೆದಾಟು, ಎತ್ತಿನಹೊಳೆ, ಕೃಷ್ಣ ಮೊದಲ ಹಂತ, ಎರಡನೇ ಹಂತದ ಕಾಮಾಗಾರಿ, ನವಾಲಿಯಲ್ಲಿ ಉಳಿದ ಕಾಮಗಾರಿಗಳಿದೆ. ಒಟ್ಟಾಗಿ ಈ ಯೋಜನೆಗಳ ಅಂದಾಜು 25,000 ಕೋಟಿ ರೂಪಾಯಿ ಆಗಿದೆ. ಭದ್ರಾ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ರಾಜ್ಯದ ನಿರೀಕ್ಷೆಗಳಿಗೆ, ಕೇಂದ್ರ ಸರ್ಕಾರವು ಶೇಕಡ 80ರಷ್ಟು ನಿಧಿ ಹಂಚಿಕೆ ಮಾಡುವ ನಿರೀಕ್ಷೆಯಿದೆ. ಇದಕ್ಕಾಗಿ ಕೇಂದ್ರ ಸಚಿವಾಲಯಕ್ಕೆ ಜಲ ಶಕ್ತಿ ಸಚಿವಾಲಯವು ಸುತ್ತೋಲೆ ಕಳುಹಿಸಿದೆ.
40 ಲಕ್ಷ ಮನೆಗೆ ನೀರು ವ್ಯವಸ್ಥೆ
ಈ ವರ್ಷ ಕರ್ನಾಟಕ ರಾಜ್ಯ ಸರ್ಕಾರವು ಸುಮಾರು 40 ಲಕ್ಷ ಕುಟುಂಬಗಳಿಗೆ ಅಥವಾ ಮನೆಗಳಿಗೆ ನಲ್ಲಿ ನೀರು ಸರಬರಾಜು ಮಾಡುವ ಗುರಿಯನ್ನು ಹೊಂದಿದೆ. ಜಲ ಜೀವನ ಮಿಷನ್ ಅಡಿಯಲ್ಲಿ ನೀರಿನ ವ್ಯವಸ್ಥೆ ಮಾಡುವ ಉದ್ದೇಶ ಹೊಂದಿದೆ. ಸುಮಾರು 1 ಕೋಟಿ ಮನೆಗೆ ನೀರಿನ ವ್ಯವಸ್ಥೆ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ. ಇದಕ್ಕಾಗಿ 7,000 ಕೋಟಿ ರೂಪಾಯಿಯ ಅಗತ್ಯವಿದೆ. ಹಾಗೆಯೇ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಹೊಸ ರೈಲನ್ನು ಆರಂಭಿಸುವ ನಿರೀಕ್ಷೆಯಿದೆ. ಬೆಂಗಳೂರು ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು, ಬೆಂಗಳೂರು-ತುಮಕೂರು-ಮೈಸೂರು ನಡುವೆ ಅಧಿಕ ವೇಗದ ರೈಲನ್ನು ಆರಂಭಿಸುವ ನಿರೀಕ್ಷೆಯಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications