ಭಾರತದಲ್ಲಿ ಪ್ರಸ್ತುತ ಪ್ರಮುಖವಾಗಿ ಎರಡು ಕಾರ್ಡ್‌ಗಳಿಗೆ ಅತೀ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ. ಅದುವೇ ಪ್ಯಾನ್ ಕಾರ್ಡ ಹಾಗೂ ಆಧಾರ್ ಕಾರ್ಡ್ ಆಗಿದೆ. ನಮ್ಮ ಯಾವುದೇ ವಹಿವಾಟುಗಳನ್ನು ನಡೆಸಲು, ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯಬೇಕಾದರೆ ನಮ್ಮಲ್ಲಿ ಆಧಾರ್ ಕಾರ್ಡ್ ಇರುವುದು ಅತೀ ಮುಖ್ಯವಾಗಿದೆ. ಹಾಗೆಯೇ ನಮ್ಮ ಎಲ್ಲ ಹಣಕಾಸು ವಹಿವಾಟಿಗೆ ಪ್ಯಾನ್ ಕಾರ್ಡ್ ಅತೀ ಮುಖ್ಯವಾಗಿದೆ.
ಈ ಎರಡು ಪ್ರಮುಖ ದಾಖಲೆಗಳನ್ನು ಲಿಂಕ್ ಮಾಡುವುದು ಕೂಡಾ ಕಡ್ಡಾಯವಾಗಿದೆ. ಹಲವಾರು ಅಗತ್ಯ ದಾಖಲೆಗಳಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲಾಗುತ್ತಿದೆ. ಅದರಂತೆಯೇ ಪ್ಯಾನ್ ಕಾರ್ಡ್‌ಗೂ ಕೂಡಾ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಈ ಹಿಂದೆ ಹಲವಾರು ಬಾರಿ ಈ ಅಗತ್ಯ ದಾಖಲೆಗಳ ಲಿಂಕ್ ಗಡುವು ವಿಸ್ತರಣೆ ಮಾಡಲಾಗಿದ್ದು, ಈಗ ನಾಳೆಯೇ ಅಂತಿಮ ಗಡುವು ಆಗಿದೆ.

ಹೌದು ಈ ಎರಡು ಅಗತ್ಯ ದಾಖಲೆಗಳನ್ನು ಲಿಂಕ್ ಮಾಡಲು ಜೂನ್ 30 ಕೊನೆಯ ದಿನಾಂಕವಾಗಿದ್ದು, ನೀವು ಸಮಯಕ್ಕೆ ಸರಿಯಾಗಿ ಲಿಂಕ್ ಮಾಡದಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರೀಯವಾಗಲಿದೆ. ಈಗಾಗಲೇ ನೀವು ಲಿಂಕ್ ಮಾಡುವಾಗ 1000 ರೂಪಾಯಿ ದಂಡವನ್ನು ಪಾವತಿ ಮಾಡಬೇಕಾಗುತ್ತದೆ. ಆದರೆ ಜುಲೈ ಬಳಿಕ ನಿಮ್ಮ ಪ್ಯಾನ್ ಕಾರ್ಡ್ ಸಂಪೂರ್ಣವಾಗಿ ನಿಷ್ಕ್ರೀಯವಾಗಲಿದೆ. ಎರಡು ದಾಖಲೆಗಳನ್ನು ಹೇಗೆ ಲಿಂಕ್ ಮಾಡುವುದು ತಿಳಿಯಿರಿ ಮುಂದೆ ಓದಿ...
ಆಧಾರ್ - ಪ್ಯಾನ್ ಲಿಂಕ್ ಮಾಡುವುದು ಹೇಗೆ?
ಹಂತ 1: ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ಗೆ ಹೋಗಿ - https://incometaxindiaefiling.gov.in/
ಹಂತ 2: ನಿಮ್ಮ ವಿವರ ಹಾಕಿ, ಪ್ಯಾನ್ ಬಳಕೆದಾರರ ಐಡಿ ಆಗಿರುತ್ತದೆ
ಹಂತ 3: ಯೂಸರ್ ಐಡಿ, ಪಾಸ್‌ವರ್ಡ್ ಮತ್ತು ಜನ್ಮ ದಿನಾಂಕ ಬಳಸಿ ಲಾಗಿನ್ ಮಾಡಿ
ಹಂತ 4: ಪಾಪ್-ಅಪ್ ವಿಂಡೋದಲ್ಲಿ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಯ್ಕೆ ಇರುತ್ತದೆ
ಹಂತ 5: ವಿಂಡೋ ಕಾಣಿಸದಿದ್ದರೆ, ಮೆನು ಬಾರ್‌ನಲ್ಲಿ 'Profile Settings' ಗೆ ಹೋಗಿ, 'Link Aadhaar' ಕ್ಲಿಕ್ ಮಾಡಿ
ಹಂತ 6: ಆಧಾರ್‌ನಲ್ಲಿರುವ ಪ್ಯಾನ್ ವಿವರ ಪರಿಶೀಲಿಸಿ, link now ಬಟನ್ ಕ್ಲಿಕ್ ಮಾಡಿದರೆ ಪ್ರಕ್ರಿಯೆ ಪೂರ್ಣ
ಎಸ್‌ಎಂಎಸ್ ಮೂಲಕ ಲಿಂಕ್ ಮಾಡಿ
ಹಂತ 1: ಎಸ್‌ಎಂಎಸ್ ಅನ್ನು ಪಡೆಯಲು 567678 ಅಥವಾ 56161ಗೆ ಡಯಲ್ ಮಾಡಿ. ಫಾರ್ಮೆಟ್ ಯುಐಡಿಪಿಎಎನ್ (10-ಅಂಕಿಯ PAN ಕಾರ್ಡ್ ಸಂಖ್ಯೆ), 12-ಅಂಕಿಯ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಸ್ಪೇಸ್ ಆಗಿರಬೇಕು.
ಹಂತ 2: ಪ್ಯಾನ್ ಆಧಾರ್ ಲಿಂಕಿಂಗ್ ಸ್ಟೇಟಸ್ ಬಗ್ಗೆ ನಿಮಗೆ ಎಸ್ಎಂಎಸ್ ಲಭ್ಯವಾಗಲಿದೆ. ಎರಡು ದಾಖಲೆಗಳಲ್ಲಿ ತೆರಿಗೆದಾರರ ಜನನ ದಿನಾಂಕವು ಒಂದೇ ಆಗಿದ್ದರೆ ಮಾತ್ರ ಆಧಾರ್ ಪ್ಯಾನ್ ಅನ್ನು ಲಿಂಕ್ ಮಾಡಬಹುದಾಗಿದೆ.
ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಚೆಕ್ ಮಾಡಿಕೊಳ್ಳಿ
ಹಂತ 1: ಆಧಾಯ ತೆರಿಗೆ ಇಲಾಖೆ ಇ-ಪೋರ್ಟಲ್‌ಗೆ ಭೇಟಿ ನೀಡಿ https://www.incometax.gov.in/iec/foportal/
ಹಂತ 2: ಎಡ ಭಾಗದಲ್ಲಿ ಕಾಣುವ Quick Linksನಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ
ಹಂತ 3: ನಿಮ್ಮ 10 ಡಿಜಿಟ್‌ನ ಪ್ಯಾನ್ ಸಂಖ್ಯೆಯನ್ನು ನಮೂದಿಸಿ
ಹಂತ 4: ನಿಮ್ಮ 12 ಡಿಜಿಟ್‌ನ ಆಧಾರ್ ಸಂಖ್ಯೆಯನ್ನು ನಮೂದಿಸಿ
ಹಂತ 5: View Link Aadhaar Status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿಯಲಿದೆ.
ನಿಮ್ಮ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಈಗಾಗಲೇ ಲಿಂಕ್ ಆಗಿದ್ದರೆ ಸ್ಕ್ರೀನ್‌ನಲ್ಲಿ Your PAN xxxxxxxxxx is already linked to given Aadhaar xxxxxxxxxxxx (ನಿಮ್ಮ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಈಗಾಗಲೇ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲಾಗಿದೆ) ಎಂದು ಕಾಣಲಿದೆ. ಒಂದು ವೇಳೆ ಪ್ಯಾನ್‌ಗೆ ಆಧಾರ್ ಲಿಂಕ್ ಆಗದಿದ್ದರೆ ನೀವು ಮುಂದಿನ ಹಂತವನ್ನು ಪಾಲಿಸಿ ಪ್ಯಾನ್ ಲಿಂಕ್ ಮಾಡಬೇಕಾಗುತ್ತದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications