ಕಳೆದ ಒಂದು ವರ್ಷದ ಅವಧಿಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಒಟ್ಟಾಗಿ ಆರು ಬಾರಿ ರೆಪೋ ದರವನ್ನು ಏರಿಕೆ ಮಾಡಿದೆ. ಆದರೆ ಸತತ ಎರಡು ಬಾರಿ ಆರ್‌ಬಿಐ ರೆಪೋ ದರವನ್ನು ಸ್ಥಿರವಾಗಿರಿಸಿದೆ. ರೆಪೋ ದರ ಹೆಚ್ಚಾಗುತ್ತಿದ್ದಂತೆ ಎಫ್‌ಡಿ ಬಡ್ಡಿದರ ಹೆಚ್ಚಿಸುತ್ತಿದ್ದ ಬ್ಯಾಂಕುಗಳು, ದರ ಸ್ಥಿರವಾಗಿರುವಾಗ ಬಡ್ಡಿದರವನ್ನು ಇಳಿಕೆ ಮಾಡುತ್ತಿದೆ. ಆದರೂ ಕೂಡಾ ಹಲವಾರು ಬ್ಯಾಂಕುಗಳಲ್ಲಿ ಇಂದಿಗೂ ಕೂಡಾ ದರ ಭಾರೀ ಹೆಚ್ಚಳವಾಗಿದೆ.
ಕಳೆದ ಎರಡು ಹಣಕಾಸು ನೀತಿ ಸಮಿತಿ ಸಭೆಗಳಲ್ಲಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರವನ್ನು ಸ್ಥಿರವಾಗಿರಿಸಿದೆ. ರೆಪೋ ದರದ ಪರಿಷ್ಕರಣೆಯಿಂದಾಗಿ ರಿಟೇಲ್ ಹಣದುಬ್ಬರವನ್ನು ನಿಯಂತ್ರಣ ಮಾಡುವ ಪ್ರಯತ್ನವನ್ನು ಮಾಡಲಾಗಿದೆ. ಆರಂಭದಲ್ಲಿ ಆರ್‌ಬಿಐ ರೆಪೋ ದರವನ್ನು ಶೇಕಡ 2.50ರಷ್ಟು ಏರಿಕೆ ಮಾಡಿದೆ. ಆದರೆ ಇದರಿಂದಾಗಿ ಲಾಭವು ಇದೆ, ನಷ್ಟವೂ ಇದೆ.

ಒಂದೆಡೆ ಸಾಲಗಳು ಅತೀ ದುಬಾರಿಯಾಗಿದ್ದು, ಹೆಚ್ಚಿನ ಇಎಂಐ ಆದ ಕಾರಣ ಸಾಲಗಾರರಿಗೆ ಹೊರೆಯಾಯಿತು. ಇನ್ನೊಂದೆಡೆ ಎಫ್‌ಡಿಗಳು ಮತ್ತು ಉಳಿತಾಯ ಖಾತೆಗಳ ಮೇಲಿನ ಬಡ್ಡಿಯು ಹೆಚ್ಚಾಯಿತು. ರೆಪೋ ದರ ಹೆಚ್ಚಾಗುತ್ತಿದ್ದಂತೆ ಬ್ಯಾಂಕುಗಳು ಎಫ್‌ಡಿ ಮೇಲೆ ಶೇಕಡ 9ರಷ್ಟು ಬಡ್ಡಿದರವನ್ನು ನೀಡಲು ಆರಂಭ ಮಾಡಿದೆ. ಅದರಲ್ಲೂ ಮುಖ್ಯವಾಗಿ ಹಿರಿಯ ನಾಗರಿಕರಿಗೆ ಅಧಿಕ ಬಡ್ಡಿದರವನ್ನು ನೀಡಲಾಗುತ್ತದೆ. ಯಾವೆಲ್ಲ ಬ್ಯಾಂಕುಗಳಲ್ಲಿ ಅಧಿಕ ಬಡ್ಡಿದರ ನೀಡಲಾಗುತ್ತದೆ ಎಂಬ ವಿವರ ಇಲ್ಲಿದೆ ಮುಂದೆ ಓದಿ....
ಎಫ್‌ಡಿಗೆ ಅಧಿಕ ಬಡ್ಡಿದರ ನೀಡುವ ಬ್ಯಾಂಕುಗಳಿವು
1. ಯೂನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕು: ಯೂನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಎಫ್‌ಡಿ ಮೇಲೆ ಶೇಕಡ 9ಕ್ಕಿಂತ ಅಧಿಕ ಬಡ್ಡಿದರವನ್ನು ನೀಡುತ್ತದೆ. 181 ರಿಂದ 201 ದಿನಗಳಲ್ಲಿ ಮೆಚ್ಯೂರಿಟಿ ಹೊಂದುವ ಫಿಕ್ಸಿಡ್ ಡೆಪಾಸಿಟ್‌ಗಳ ಮೇಲೆ ಯೂನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಶೇಕಡ 9.25ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. ಹೆಚ್ಚುವರಿಯಾಗಿ, 1001 ದಿನಗಳಲ್ಲಿ ಮೆಚ್ಯೂರಿಟಿ ಹೊಂದುವ ಎಫ್‌ಡಿಗಳ ಮೇಲೆ ಶೇಕಡ 9.50ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ.
2. ಫಿನ್‌ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್: ಫಿನ್‌ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಎಫ್‌ಡಿ ಮೇಲೆ ಶೇಕಡ 9ಕ್ಕಿಂತ ಅಧಿಕ ಬಡ್ಡಿದರವನ್ನು ನೀಡುತ್ತದೆ. ಫಿನ್‌ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನಲ್ಲಿ ಹಿರಿಯ ನಾಗರಿಕ ಗ್ರಾಹಕರು 1000 ದಿನಗಳಲ್ಲಿ ಮೆಚ್ಯೂರಿಟಿ ಹೊಂದುವ ಫಿಕ್ಸಿಡ್ ಡೆಪಾಸಿಟ್‌ಗಳ ಮೇಲೆ ಶೇಕಡ 9.11ರಷ್ಟು ಬಡ್ಡಿದರವನ್ನು ಪಡೆಯಲು ಸಾಧ್ಯವಾಗುತ್ತದೆ.
3. ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್: ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಎಫ್‌ಡಿ ಮೇಲೆ ಶೇಕಡ 9ಕ್ಕಿಂತ ಅಧಿಕ ಬಡ್ಡಿದರವನ್ನು ನೀಡುತ್ತದೆ. ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಹಿರಿಯ ನಾಗರಿಕರಿಗೆ ಶೇಕಡ 9ಕ್ಕಿಂತ ಅಧಿಕ ಬಡ್ಡಿದರವನ್ನು ನೀಡುತ್ತದೆ. ಈ ದರವು 366 ರಿಂದ 499 ದಿನಗಳು, 501 ರಿಂದ 730 ದಿನಗಳು ಮತ್ತು 500 ದಿನಗಳಲ್ಲಿ ಮೆಚ್ಯೂರಿಟಿ ಹೊಂದುವ ಎಫ್‌ಡಿಗಳಿಗೆ ಅನ್ವಯವಾಗುತ್ತದೆ.
4. ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್: ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಎಫ್‌ಡಿ ಮೇಲೆ ಶೇಕಡ 9ಕ್ಕಿಂತ ಅಧಿಕ ಬಡ್ಡಿದರವನ್ನು ನೀಡುತ್ತದೆ. ಹಿರಿಯ ನಾಗರಿಕರು ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನಲ್ಲಿ 5 ವರ್ಷಗಳಲ್ಲಿ ಮೆಚ್ಯೂರಿಟಿ ಹೊಂದುವ ಎಫ್‌ಡಿ ಮೇಲೆ ಶೇಕಡ 9.6ರಷ್ಟು ಬಡ್ಡಿದರವನ್ನು ನೀಡುತ್ತದೆ. ಇದಲ್ಲದೆ, 999 ದಿನಗಳಲ್ಲಿ ಮೆಚ್ಯೂರಿಟಿ ಹೊಂದುರವ ಎಫ್‌ಡಿ ಮೇಲೆ ಶೇಕಡ 9ರಷ್ಟು ಬಡ್ಡಿದರ ಲಭ್ಯವಿದೆ.
5. ಇಎಸ್‌ಎಎಫ್ ಸ್ಮಾಲ್ ಫೈನಾನ್ಸ್ ಬ್ಯಾಂಕು: ಇಎಸ್‌ಎಎಫ್ ಸ್ಮಾಲ್ ಫೈನಾನ್ಸ್ ಬ್ಯಾಂಕು ಎಫ್‌ಡಿ ಮೇಲೆ ಶೇಕಡ 9ಕ್ಕಿಂತ ಅಧಿಕ ಬಡ್ಡಿದರವನ್ನು ನೀಡುತ್ತದೆ. ಈ ಬ್ಯಾಂಕ್ 2 ರಿಂದ 3 ವರ್ಷಗಳಲ್ಲಿ ಮೆಚ್ಯೂರಿಟಿ ಹೊಂದುವ ಫಿಕ್ಸಿಡ್ ಡೆಪಾಸಿಟ್ ಮೇಲೆ ಹಿರಿಯ ನಾಗರಿಕರಿಗೆ ಶೇಕಡ 9ರಷ್ಟು ಬಡ್ಡಿದರವನ್ನು ನೀಡುತ್ತದೆ.


Click it and Unblock the Notifications