ಗೃಹ ಬಳಕೆಯ ಎಲ್‌ಪಿಜಿ ಗ್ಯಾಸ್ ಬಳಕೆದಾರರಿಗೆ ಇಲ್ಲೊಂದು ಪ್ರಮುಖ ಸುದ್ದಿಯಿದೆ. ಇ-ಕೆವೈಸಿಯನ್ನು ಮಾಡಿಸಿಕೊಳ್ಳದ ಗ್ರಾಹಕರಿಗೆ ಇಲಾಖೆಯು ಕೆಲವು ಸ್ಪಷ್ಟತೆಗಳನ್ನು ನೀಡುವ ಮೂಲಕ ರಿಲೀಫ್ ನೀಡಿದೆ. ಎಲ್‌ಪಿಜಿ ಗ್ಯಾಸ್ ಇಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ, ಅದು ಕೂಡಾ ಈ ತಿಂಗಳ ಕೊನೆಯ ಒಳಗಾಗಿ ಮಾಡಿಸಬೇಕು ಎಂದು ಈ ಹಿಂದೆ ವರದಿಯಾಗಿದೆ.
ನೀವು ಎಲ್‌ಪಿಜಿ ಸಬ್ಸಿಡಿಯನ್ನು ಪಡೆಯುತ್ತಿದ್ದರೆ, ಅದು ಮುಂದುವರಿಯಬೇಕಾದರೆ, ನೀವು ಶೀಘ್ರದಲ್ಲೇ ಇ-ಕೆವೈಸಿಯನ್ನು ಮಾಡಬೇಕು. ಇದಕ್ಕಾಗಿ ನೀವು ನಿಮ್ಮ ಗ್ಯಾಸ್ ಏಜೆನ್ಸಿಗೆ ಹೋಗಬೇಕಾಗುತ್ತದೆ. ಡಿಸೆಂಬರ್ 31ರ ಒಳಗಾಗಿ ಈ ಕಾರ್ಯವನ್ನು ಮಾಡಬೇಕು ಎಂದು ವರದಿಗಳು ಹೇಳಿತ್ತು. ಆದರೆ ಈ ಬಗ್ಗೆ ಇಲಾಖೆ ಸ್ಪಷ್ಟತೆ ನೀಡಿದೆ.

ಇಲಾಖೆ ಹೇಳುವುದೇನು?
ದಿನಾಂಕ 31-12-2023ರ ಒಳಗಾಗಿ ಗ್ಯಾಸ್ ಏಜೆನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಎನ್ನುವ ವದಂತಿ ಮತ್ತು ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕೆಂಬ ವದಂತಿ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಗೆ ಕಾರಣ ಆಗಿದೆ.
ಸಾರ್ವಜನಿಕರಲ್ಲಿ ಪ್ರಕಟಣೆ ಏನೆಂದರೆ ಮೇಲ್ಕಂಡ ವಿಷಯವು ಕೇವಲ ವದಂತಿಯಾಗಿದ್ದು, ಅಡುಗೆ ಅನಿಲ ಗ್ರಾಹಕರು ತಮ್ಮ ಏಜೆನ್ಸಿಗೆ ತೆರಳಿ ಇ-ಕೆವೈಸಿ ನೀಡಬಹುದಾಗಿದೆ. ಅದು ಸಹ ಉಚಿತವಾಗಿ ನೀಡಬಹುದು. ಆದರೆ ಕೇಂದ್ರ ಸರ್ಕಾರವು ಯಾವುದೇ ಕೊನೆಯ ದಿನಾಂಕವನ್ನು ನಿಗಧಿಪಡಿಸಿರುವುದಿಲ್ಲ.
ಉಜ್ವಲ ಯೋಜನೆಯ ಗ್ಯಾಸ್ ಸಂಪರ್ಕ ಪಡೆದಿರುವವರು ಇ-ಕೆವೈಸಿ ಮೊದಲು ಆದ್ಯತೆಯಾಗಿ ನೀಡಬೇಕಾಗಿದೆ. ಉಳಿದಂತೆ ಗ್ಯಾಸ್ ಸಂಪರ್ಕ ಹೊಂದಿರುವವರು ಆಧಾರ್ ಸಂಖ್ಯೆ ದಾಖಲೆಯೊಂದಿಗೆ ಸಂಬಂಧಿಸಿದ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಇ-ಕೆವೈಸಿ ನೀಡಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳುವಂತೆ ತಿಳಿಸಲಾಗಿದೆ ಎಂದು ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಯಾವಾಗ ಮಾಡಬಹುದು?
ಇ-ಕೆವೈಸಿಯ ಈ ಕೆಲಸವನ್ನು ಗ್ಯಾಸ್ ಏಜೆನ್ಸಿಯ ಕಚೇರಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಮಾಡಬಹುದು. ಇ-ಕೆವೈಸಿ ಸರ್ಕಾರದ ಸೂಚನೆಗಳ ಮೇರೆಗೆ ನವೆಂಬರ್ 25 ರಿಂದ ಪ್ರಾರಂಭವಾಗಿದೆ. ಸದ್ಯ ಯಾವುದೇ ಕೊನೆಯ ದಿನಾಂಕವನ್ನು ಸರ್ಕಾರ ನಿಗದಿಪಡಿಸಿಲ್ಲ. ಭಾರತ ಸರ್ಕಾರದ ತೈಲ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಸೂಚನೆಗಳ ಪ್ರಕಾರ, ಸಬ್ಸಿಡಿ ಗ್ಯಾಸ್ ಬೆಲೆಗಳನ್ನು ಪಡೆಯುವ ಗ್ರಾಹಕರಿಗೆ ಇ-ಕೆವೈಸಿ ಅಗತ್ಯವಾಗಿದೆ.
ಇಕೆವೈಸಿ ಮಾಡಿಸಿದವರೆಷ್ಟು?
ಭಾರತ್ ಗ್ಯಾಸ್‌ನ ಸ್ಥಳೀಯ ಉಮಾ ಭಾರತ್ ಗ್ಯಾಸ್ ಏಜೆನ್ಸಿಯ ನಿರ್ದೇಶಕ ಸತ್ಯೇಂದ್ರ ಸಿಂಗ್ ಪ್ರಕಾರ, ಗ್ರಾಹಕರ ಇ-ಕೆವೈಸಿ ಕಾರ್ಯವು ಸಚಿವಾಲಯದ ಸೂಚನೆಗಳಿಗೆ ಅನುಸಾರವಾಗಿ ನಡೆಯುತ್ತಿದೆ. ತಮ್ಮ ಏಜೆನ್ಸಿಗೆ ಸಂಬಂಧಿಸಿದ 15500 ಗ್ರಾಹಕರಲ್ಲಿ ಇದುವರೆಗೆ 500 ಮಂದಿ ಮಾತ್ರ ಇ-ಕೆವೈಸಿ ಮಾಡಿದ್ದಾರೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.
ಆಧಾರ್ ಕಾರ್ಡ್ ಬಹಳ ಮುಖ್ಯ
ಪ್ರಸ್ತುತ ಎಲ್ಲ ಕಾರ್ಯಗಳಿಗೆ ಆಧಾರ್ ಕಾರ್ಡ್ ಅತೀ ಅಗತ್ಯ ಎಂದು ಪರಿಗಣಿಸಲಾಗಿದೆ. ನಾವು ಸರ್ಕಾರದ ಯಾವುದೇ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಆಧಾರ್ ಕಾರ್ಡ್ ಪ್ರಮುಖ ದಾಖಲೆಯಾಗಿ ಪರಿಗಣಿಸಲಾಗುತ್ತದೆ. ಹಾಗೆಯೇ ಉಳಿದ ದಾಖಲೆಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯಗೊಳಿಸಲಾಗುತ್ತಿದೆ.
More From GoodReturns

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

LPG cylinder Price: ದೇಶದ ಜನರಿಗೆ ಅಡುಗೆ ಅನಿಲ ದರ ಶಾಕ್… LPG ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!



Click it and Unblock the Notifications