ನಾಳೆಯಿಂದ ಅಂದರೆ ಹೊಸ ವರ್ಷದಿಂದ ಎಟಿಎಂನ ವಿತ್‌ಡ್ರಾ ಶುಲ್ಕವು ದುಬಾರಿ ಆಗಲಿದೆ. 2022 ರಿಂದ ಎಟಿಎಂಗಳಿಂದ ನಗದು ಹಿಂಪಡೆಯುವುದು ಹೆಚ್ಚು ದುಬಾರಿಯಾಗಲಿದೆ. ಮುಂದಿನ ತಿಂಗಳಿನಿಂದ ಎಟಿಎಂ ಬಳಕೆದಾರರು ಉಚಿತ ಎಟಿಎಂ ವಹಿವಾಟಿನ ಮಿತಿಯನ್ನು ಮೀರಿದರೆ ಹೆಚ್ಚಿನ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.
1 ಜನವರಿ 2022 ರಿಂದ, ಉಚಿತ ಮಾಸಿಕ ಮಿತಿಯು ಮುಗಿದ ನಂತರ ಬ್ಯಾಂಕ್ ಗ್ರಾಹಕರು ತಮ್ಮ ಎಟಿಎಂ ವಹಿವಾಟುಗಳಿಗೆ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಎಟಿಎಂಗಳಲ್ಲಿ ನಗದು ಹಿಂಪಡೆಯುವ ಶುಲ್ಕವನ್ನು 1 ಜನವರಿ 2022 ರಿಂದ ಹೆಚ್ಚಿಸಲಾಗುವುದು ಎಂದು ಘೋಷಣೆ ಮಾಡಿದೆ.
ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್‌ಗಳು ನಗದು ಮತ್ತು ನಗದುರಹಿತ ಎಟಿಎಂಗೆ ಹೆಚ್ಚಿದ ಶುಲ್ಕಗಳ ಕುರಿತು ತಮ್ಮ ವೆಬ್‌ಸೈಟ್ ಮೂಲಕ ತಿಳಿಸಿದೆ. ಈ ನಡುವೆ ನೀವು ಈ ಐದು ವಿಚಾರಗಳನ್ನು ತಿಳಿಯಲೇ ಬೇಕಾಗಿದೆ. ಏನದು? ತಿಳಿಯಲು ಮುಂದೆ ಓದಿ...

ನೀವು ತಿಳಿಯಬೇಕಾದ ಐದು ವಿಚಾರಗಳು
* ಜನವರಿ ಒಂದರಿಂದ ಎಟಿಎಂ ನಗದು ಹಿಂಪಡೆಯುವ ನಿಯಮಗಳು ಬದಲಾವಣೆ: ಜನವರಿ 2022 ರಿಂದ ಉಚಿತ ಮಾಸಿಕ ಅನುಮತಿಸುವ ಮಿತಿಯನ್ನು ಮೀರಿ ನಗದು ಮತ್ತು ನಗದು ರಹಿತ ಎಟಿಎಂ ವಹಿವಾಟುಗಳಿಗೆ ಶುಲ್ಕವನ್ನು ಹೆಚ್ಚಿಸಲು ಕೇಂದ್ರ ಬ್ಯಾಂಕ್ ಬ್ಯಾಂಕ್‌ಗಳಿಗೆ ಅನುಮತಿ ನೀಡಿದೆ.
* 1 ಜನವರಿ 2022 ರಿಂದ, ಗ್ರಾಹಕರು ಮಾಸಿಕ ಉಚಿತ ವಹಿವಾಟು ಮಿತಿಯನ್ನು ಮೀರಿದರೆ ರೂಪಾಯಿ 20 ರ ಬದಲಿಗೆ ಪ್ರತಿ ವಹಿವಾಟಿಗೆ ರೂಪಾಯಿ 21 ಅನ್ನು ಪಾವತಿಸಬೇಕಾಗುತ್ತದೆ.
* ಸ್ವಂತ ಬ್ಯಾಂಕ್‌ನಲ್ಲಿ ಉಚಿತ ಎಟಿಎಂ ವಹಿವಾಟಿನ ಮಾಸಿಕ ಮಿತಿ: ಆದಾಗ್ಯೂ, ಬ್ಯಾಂಕ್ ಗ್ರಾಹಕರು ತಮ್ಮ ಸ್ವಂತ ಬ್ಯಾಂಕ್ ಎಟಿಎಂಗಳಿಂದ ಪ್ರತಿ ತಿಂಗಳು ಐದು ಉಚಿತ ವಹಿವಾಟುಗಳನ್ನು ಹೊಂದಿದ್ದಾರೆ. ಅದು ಹಣಕಾಸು ಮತ್ತು ಹಣಕಾಸುೇತರ ವಹಿವಾಟುಗಳನ್ನು ಒಳಗೊಂಡಿದೆ. ಈ ಮಿತಿಯನ್ನು ಮೀರಿದರೆ ಪ್ರತಿ ವಹಿವಾಟಿಗೆ ರೂಪಾಯಿ 21 ಅನ್ನು ಪಾವತಿ ಮಾಡಬೇಕಾಗುತ್ತದೆ.
* ಇತರ ಬ್ಯಾಂಕ್‌ನಲ್ಲಿ ಉಚಿತ ಎಟಿಎಂ ವಹಿವಾಟಿನ ಮಾಸಿಕ ಮಿತಿ: ಇದಲ್ಲದೆ, ಬ್ಯಾಂಕ್ ಗ್ರಾಹಕರು ಇತರ ಬ್ಯಾಂಕ್ ಎಟಿಎಂಗಳಿಂದ ಉಚಿತ ವಹಿವಾಟುಗಳಿಗೆ ಅರ್ಹರಾಗಿರುತ್ತಾರೆ. ಅಂದರೆ ಮೆಟ್ರೋ ಕೇಂದ್ರಗಳಲ್ಲಿ ಮೂರು ವಹಿವಾಟುಗಳು ಮತ್ತು ಮೆಟ್ರೋ ಅಲ್ಲದ ಕೇಂದ್ರಗಳಲ್ಲಿ ಐದು ವಹಿವಾಟುಗಳನ್ನು ಉಚಿತವಾಗಿ ಮಾಡಬಹುದು. ಇದು ಕೂಡಾ ಹಣಕಾಸು ಮತ್ತು ಹಣಕಾಸೇತರ ವಹಿವಾಟುಗಳನ್ನು ಒಳಗೊಂಡಿದೆ. ಈ ಮಿತಿಯನ್ನು ಮೀರಿದರೆ ಪ್ರತಿ ವಹಿವಾಟಿಗೆ ಅಧಿಕ ಹಣ ಪಾವತಿ ಮಾಡಬೇಕಾಗುತ್ತದೆ.
* ಬದಲಾವಣೆ ಯಾಕೆ ನಡೆಯುತ್ತಿದೆ: ಜೂನ್ 2019 ರಲ್ಲಿ ಆರ್‌ಬಿಐ ಸ್ಥಾಪಿಸಿದ ಸಮಿತಿಯ ಸಲಹೆಗಳ ಆಧಾರದ ಮೇಲೆ ಈ ಬದಲಾವಣೆಯನ್ನು ಘೋಷಣೆ ಮಾಡಲಾಗಿದೆ. ಎಟಿಎಂ ಶುಲ್ಕಗಳು ಮತ್ತು ಶುಲ್ಕಗಳ ಸಂಪೂರ್ಣ ಶ್ರೇಣಿಯನ್ನು ಪರಿಶೀಲನೆ ಮಾಡುವ ನಿಟ್ಟಿನಲ್ಲಿ ಭಾರತೀಯ ಬ್ಯಾಂಕ್‌ಗಳ ಸಂಘದ ಮುಖ್ಯ ಕಾರ್ಯನಿರ್ವಾಹಕರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಎಟಿಎಂ ವಹಿವಾಟುಗಳಿಗಾಗಿ ಇಂಟರ್ಚೇಂಜ್ ರಚನೆಯ ಮೇಲೆ ನಿರ್ದಿಷ್ಟ ಗಮನವನ್ನು ಹೊಂದಿದೆ. "ಹೆಚ್ಚಿನ ಇಂಟರ್‌ಚೇಂಜ್ ಶುಲ್ಕವನ್ನು ಸರಿದೂಗಿಸಲು ಮತ್ತು ವೆಚ್ಚದಲ್ಲಿ ಸಾಮಾನ್ಯ ಹೆಚ್ಚಳವನ್ನು ನೀಡುವುದಕ್ಕಾಗಿ, ಪ್ರತಿ ವಹಿವಾಟಿಗೆ ಗ್ರಾಹಕ ಶುಲ್ಕವನ್ನು ರೂಪಾಯಿ 21 ಕ್ಕೆ ಹೆಚ್ಚಳ ಮಾಡಲು ಬ್ಯಾಂಕುಗಳಿಗೆ ಅನುಮತಿ ನೀಡಲಾಗಿದೆ. ಈ ಹೆಚ್ಚಳವು ಜನವರಿ 1, 2022 ರಿಂದ ಜಾರಿಗೆ ಬರಲಿದೆ," ಎಂದು ಆರ್‌ಬಿಐ ಸುತ್ತೋಲೆಯಲ್ಲಿ ತಿಳಿಸಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications