ಜಾಗತಿಕವಾಗಿ ಕಚ್ಚಾ ತೈಲ ದರ ಏರಿಕೆ ಕಾಣುತ್ತಿದೆ. ರಷ್ಯಾ, ಉಕ್ರೇನ್ ಯುದ್ಧ, ಹಣದುಬ್ಬರದ ನಡುವೆ ಕಚ್ಚಾ ತೈಲ ದರ ಹೆಚ್ಚಳವಾಗುತ್ತಲೇ ಇದೆ. ಶುಕ್ರವಾರ ಈ ಸಮಯಕ್ಕೆ ಕುಗ್ಗಿ 122.0 ಯುಎಸ್ ಡಾಲರ್‌ನಷ್ಟಿದೆ. ಆದರೆ ದೇಶದಲ್ಲಿ ಇಂಧನ ದರ ಮಾತ್ರ ಸ್ಥಿರವಾಗಿದೆ. ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ.
ರಷ್ಯಾ ಮತ್ತು ಉಕ್ರೇನ್ ಯುದ್ಧದ ನಡುವೆ ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ ನೂರರ ಗಡಿಯನ್ನು ದಾಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಈ ವೇಳೆ ಪರಿಷ್ಕರಣೆ ಮಾಡುತ್ತದೆ. ಆದರೆ ಹಲವಾರು ದಿನಗಳಿಂದ ಸ್ಥಿರವಾಗಿದೆ.
ಆದರೆ ಮತ್ತೆ ಇಂಧನ ದರವು ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ನೂರರ ಗಡಿಯನ್ನು ದಾಟಿದೆ. ಕೇಂದ್ರ ಸರ್ಕಾರ ಸುಂಕವನ್ನು ಕಡಿತ ಮಾಡಿದ ಬಳಿಕ ಇಂಧನ ದರ ಕೊಂಚ ಇಳಿಕೆ ಕಂಡರೂ ಹಲವಾರು ಪ್ರದೇಶದಲ್ಲಿ ನೂರರ ಗಡಿಯನ್ನು ದಾಟಿದೆ.

ದೆಹಲಿಯಲ್ಲಿ ಪ್ರಸ್ತುತ ಪೆಟ್ರೋಲ್ ಪ್ರತಿ ಲೀಟರ್‌ಗೆ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂಪಾಯಿ ಆಗಿದೆ. ಗೋಲ್ಡ್‌ಮನ್ ಸ್ಯಾಚ್ಸ್ ಬ್ರೆಂಟ್ ಕಚ್ಚಾ ತೈಲವು ಮುಂದಿನ ತ್ರೈಮಾಸಿಕದಲ್ಲಿ ಪ್ರತಿ ಬ್ಯಾರೆಲ್‌ಗೆ 140 ಡಾಲರ್‌ಗೆ ತಲುಪುತ್ತದೆ. ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ಪ್ರತಿ ಬ್ಯಾರೆಲ್‌ಗೆ 130 ಡಾಲರ್ ಆಗಲಿದೆ ಎಂದು ಅಂದಾಜು ಮಾಡಲಾಗಿದೆ.
ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ಬ್ರೆಂಟ್ ಕಚ್ಚಾ ಬೆಲೆಗಳು ಪ್ರತಿ ಬ್ಯಾರೆಲ್‌ಗೆ 140 ಡಾಲರ್ ತಲುಪುತ್ತದೆ. ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ಪ್ರತಿ ಬ್ಯಾರೆಲ್‌ಗೆ 130 ಡಾಲರ್ ಆಗಿರುತ್ತದೆ ಎಂದು ತಜ್ಞರು ಅಂದಾಜು ಮಾಡಿದ್ದಾರೆ. ಈ ಅಂದಾಜಿಕ ಪ್ರಕಾರ ದೇಶದಲ್ಲಿ ಇಂಧನ ದರವು ಭಾರೀ ಹೆಚ್ಚಳವಾಗಲಿದೆ.


Click it and Unblock the Notifications