ಪ್ಯಾನ್ ಕಾರ್ಡ್ ಗೆ ನೀವಿನ್ನೂ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಲ್ಲವೇ ಹಾಗಿದ್ದರೆ ಈ ಸುದ್ದಿಯನ್ನು ನೀವು ತಪ್ಪದೇ ಓದಲ್ಲೇಬೇಕುತ್ತದೆ. ಹೌದು, ಪ್ರತಿಯೊಬ್ಬ ಭಾರತೀಯ ನಾಗರಿಕನಿಗೂ ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಗುರತಿನ ಪುರಾವೆ ತಂಬಾನೇ ಮುಖ್ಯ. ಒಂದು ವೇಳೆ ನೀವು ಈ ಪ್ರಕ್ರಿಯೆಯನ್ನು ಇನ್ನೂ ಪೂರ್ಣಗೊಳಿಸದಿದ್ದರೆ, ಜುಲೈ ತಿಂಗಳಿನಿಂದ ನಿಮ್ಮ ಪ್ಯಾನ್ ಕಾರ್ಡ್ ಸ್ಥಗಿತಗೊಳ್ಳುತ್ತದೆ. ಇದರಿಂದ ನಿಮ್ಮ ಹಣಕಾಸಿನ ವ್ಯವಹಾರಗಳಿಗೆ ಹೆಚ್ಚಿನ ತೊಂದರೆ ಉಂಟಾಗುತ್ತದೆ.

ನೀವು ಪ್ಯಾನ್ ಕಾರ್ಡ್ ಇಲ್ಲದೆ ಬ್ಯಾಂಕ್ ಖಾತೆ ತೆರೆಯಲು, ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಲು ಅಥವಾ ಷೇರುಗಳನ್ನು ಖರೀದಿಸಲು ಸಾಧ್ಯವಿಲ್ಲ. ಒಂದು ವೇಳೆ ಪ್ಯಾನ್ ಕಾರ್ಡ್ ಆಧಾರ್ ಜೊತೆ ಲಿಂಕ್ ಆಗದಿಂದ್ದಾರೆ ಆದಾಯ ತೆರಿಗೆ ರಿಟರ್ನ್ (ITR) ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಸಲ್ಲಿಸಿದರೂ ಸಹ ಅದು ತಿರಸ್ಕಾರವಾಗುತ್ತದೆ. ಇದಲ್ಲದೇ ಆಧಾರ್ ಮತ್ತು ಪ್ಯಾನ್ ಕಾರ್ಡ್ ಜೋಡಣೆಯಾಗದಿದ್ದಲ್ಲಿ, ನಿಮ್ಮ ಐಟಿಆರ್ ಪ್ರಕ್ರಿಯೆಗೊಳಿಸಲು ಸಾಧ್ಯವಿಲ್ಲ. ಇದರಿಂದ ನಿಮಗೆ ಬರಬೇಕಾದ ರಿಫಂಡ್ ಸಹ ಸ್ಥಗಿತಗೊಳ್ಳಬಹುದು. ಪ್ಯಾನ್ ಕಾರ್ಡ್ ಅನ್ನು ಪುನಃ ಸಕ್ರಿಯಗೊಳಿಸುವವರೆಗೆ ಈ ತೊಂದರೆ ಕೂಡ ಆಗಬಹುದು.
ನಿಮ್ಮ ಆಧಾರ್ ಮತ್ತು ಪ್ಯಾನ್ ಲಿಂಕ್ ಆಗಿಲ್ಲವಾದರೆ ನಿಮ್ಮ ಬ್ಯಾಂಕ್ ವ್ಯವಹಾರಗಳ ಮೇಲೆ ಪರಿಣಾಮ ಬೀರಬಹುದು. ಹೊಸ ಖಾತೆ ತೆರೆಯಲು ಅಥವಾ KYC ಅಪ್‌ಡೇಟ್ ಮಾಡಲು ಸಾಧ್ಯವಾಗುವುದಿಲ್ಲ. ಸ್ಥಿರ ಠೇವಣಿ (FD) ಹೊಂದಿರುವವರಿಗೂ ತೊಂದರೆಯಾಗಬಹುದು. ಒಂದು ವೇಳೆ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಂಡರೆ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಆದಾಯದ ತೆರಿಗೆ ಹೆಚ್ಚಳಕ್ಕೆ ಕಾರಣವಾಗಬಹುದು.
ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ಮ್ಯೂಚುವಲ್ ಫಂಡ್ ಅಥವಾ ಷೇರುಗಳನ್ನು ಮಾರಾಟ ಮಾಡಲು ಅಥವಾ ಖರೀದಿಸಲು ಸಾಧ್ಯವಿಲ್ಲ. ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ, ನಿಮ್ಮ ಹೂಡಿಕೆ ಖಾತೆಯನ್ನು ಮುಚ್ಚುವ ಸಾಧ್ಯತೆಯಿದೆ.
ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡವುದು ಹೇಗೆ?
ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು, ಆದಾಯ ತೆರಿಗೆ ಇ-ಫೈಲಿಂಗ್ ವೆಬ್‌ಸೈಟ್‌ಗೆ ಭೇಟಿ ನೀಡಿ. ಒಂದು ವೇಳೆ ನೀವು ಈಗಾಗಲೇ ಲಿಂಕ್ ಮಾಡದಿದ್ದರೆ, ನೀವು ರೂ. 1,000 ದಂಡವನ್ನು ಪಾವತಿಸಬೇಕಾಗುತ್ತದೆ. ಆನ್‌ಲೈನ್ ಮೂಲಕ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಲಿಂಕ್ ಮಾಡಿದ ನಂತರ, ಸುಮಾರು 30 ದಿನಗಳಲ್ಲಿ ನಿಮ್ಮ ಪ್ಯಾನ್ ಕಾರ್ಡ್ ನವೀಕರಣ ಸಮಯಬೇಕಾಗುತ್ತದೆ ಪ್ಯಾನ್ ಕಾರ್ಡ್‌ನೊಂದಿಗೆ ಆಧಾರ್ ಲಿಂಕ್ ಮಾಡುವುದು ಕೇವಲ ಕಾನೂನು ಪ್ರಕ್ರಿಯೆಯಲ್ಲ, ಇದು ನಿಮ್ಮ ಎಲ್ಲಾ ಹಣಕಾಸಿನ ವಹಿವಾಟುಗಳನ್ನು ಹೆಚ್ಚು ಸುರಕ್ಷಿತವಾಗಿಸುತ್ತದೆ ಮತ್ತು ವಂಚನೆಗಳನ್ನು ತಡೆಯುತ್ತದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications