ಕೇಂದ್ರ ಸರ್ಕಾರವು ಇತ್ತೀಚೆಗೆ ಮಂಡನೆ ಮಾಡಿದ 2023-24ನೇ ಹಣಕಾಸು ವರ್ಷದ ಕೇಂದ್ರ ಬಜೆಟ್‌ನಲ್ಲಿ ರೈತರಿಗೆ ಧನ ಸಹಾಯ ಮಾಡುವ ಯೋಜನೆಗಳ ಮೊತ್ತವನ್ನು ಏರಿಕೆ ಮಾಡುವ ನಿರೀಕ್ಷೆಯಿತ್ತು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಮೊತ್ತವನ್ನು 6 ಸಾವಿರದಿಂದ 8 ಸಾವಿರಕ್ಕೆ ನಿರೀಕ್ಷೆಯಿತ್ತು. ಆದರೆ ಸರ್ಕಾರ ಯಾವುದೇ ಏರಿಕೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿಲ್ಲ.
ಈ ಬಗ್ಗೆ ಮಂಗಳವಾರ (ಫೆಬ್ರವರ 7) ಸಂಸತ್ತಿನಲ್ಲಿ ಮಾಹಿತಿ ನೀಡಿರುವ ಸರ್ಕಾರವು ಅರ್ಹ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೊತ್ತವನ್ನು ವಾರ್ಷಿಕವಾಗಿ 6 ಸಾವಿರದಿಂದ ಏರಿಕೆ ಮಾಡುವ ಯಾವುದೇ ನಿರ್ಧಾರವನ್ನು ಕೈಗೊಳ್ಳಲಾಗಿಲ್ಲ ಎಂದು ಸ್ಪಷ್ಟಣೆ ನೀಡಿದೆ.
ಸರ್ಕಾರವು ರೈತರ ಪಿಎಂ ಕಿಸಾನ್ ಯೋಜನೆಯ ಮೊತ್ತವನ್ನು ಆರು ಸಾವಿರ ರೂಪಾಯಿಯಿಂದ 8 ಸಾವಿರ ರೂಪಾಯಿಗೆ ಏರಿಕೆ ಮಾಡುವ ಸಾಧ್ಯತೆಯಿದೆ. ಮುಖ್ಯವಾಗಿ 2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಕಾರಣದಿಂದಾಗಿ ಸರ್ಕಾರವು ಈ ಕ್ರಮವನ್ನು ಕೈಗೊಳ್ಳಬಹುದು ಎಂದು ಮಾಧ್ಯಮಗಳು ವರದಿ ಮಾಡಿತ್ತು. ಹಲವಾರು ತಜ್ಞರುಗಳ ಅಭಿಪ್ರಾಯವೂ ಕೂಡಾ ಇದೇ ಆಗಿತ್ತು.
ಹೋಳಿ ವೇಳೆಗೆ ಮೊತ್ತ ಜಮೆ
ರೈತರ ನಿರಾಸೆ ನೀಡುವ ಘೋಷಣೆಯನ್ನು ಮಾಡುತ್ತಾ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, "ರೈತರ ಕಿಸಾನ್ ಸಮ್ಮಾನ್ ನಿಧಿಯ ಮೊತ್ತವನ್ನು ಏರಿಕೆ ಮಾಡಲು ಪ್ರಸ್ತುತ ಯಾವುದೇ ಪ್ರಸ್ತಾಪವಿಲ್ಲ," ಎಂದು ತಿಳಿಸಿದ್ದಾರೆ. ಪಿಎಂ ಕಿಸಾನ್ ಮೊತ್ತ ಏರಿಸಲಾಗುವುದೇ ಎಂದು ಲೋಕಸಭೆಯಲ್ಲಿ ಪ್ರಶ್ನೆ ಕೇಳಲಾಗಿದ್ದು, ಅದಕ್ಕೆ ಲಿಖಿತ ಉತ್ತರವನ್ನು ಕೇಂದ್ರ ಕೃಷಿ ಸಚಿವರು ನೀಡಿದ್ದಾರೆ. ಆದರೆ ವರದಿಗಳ ಪ್ರಕಾರ ಮುಂದಿನ ಕಂತು ಹೋಳಿ ವೇಳೆಗೆ ಬಿಡುಗೆಯಾಗುವ ನಿರೀಕ್ಷೆಯಿದೆ. ಸಾಮಾನ್ಯವಾಗಿ ಡಿಸೆಂಬರ್‌ನಿಂದ ಮಾರ್ಚ್ ವೇಳೆಗೆ ಈ ಕಂತನ್ನು ಬಿಡುಗಡೆ ಮಾಡಲಾಗುತ್ತದೆ. ಈ ಅಂದಾಜಿನ ಪ್ರಕಾರ ಹೋಳಿ ವೇಳೆಗೆ ಮೊತ್ತ ಜಮೆಯಾಗುವ ನಿರೀಕ್ಷೆಯಿದೆ.
ಪಿಎಂ ಕಿಸಾನ್ ಯೋಜನೆಯ ಮಾಹಿತಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯನ್ನು 2019ರಲ್ಲಿ ಜಾರಿ ಮಾಡಿದ್ದಾರೆ. ಭೂಮಿಯನ್ನು ಹೊಂದಿರುವ ರೈತರಿಗೆ ಸಹಾಯವ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ. ಈ ಯೋಜನೆಯಡಿಯಲ್ಲಿ ಮೊತ್ತವನ್ನು ಮೂರು ಕಂತುಗಳಾಗಿ ನೀಡಲಾಗುತ್ತದೆ. ಪ್ರತಿ ಕಂತಿನಲ್ಲಿ 2 ಸಾವಿರ ರೂಪಾಯಿಯಂತೆ ಮೂರು ಕಂತಲ್ಲಿ 6 ಸಾವಿರ ರೂಪಾಯಿಯನ್ನು ರೈತರ ಖಾತೆಗೆ ನೇರ ಜಮೆ ಮಾಡಲಾಗುತ್ತದೆ. ಅದರಲ್ಲೂ ಕೆಲವು ಮಾನದಂಡಗಳು ಇದೆ.
ಮೊತ್ತ ಏರಿಸುವ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆ
ಬಜೆಟ್ 2023ರಲ್ಲಿ ರೈತರಿಗೆ ಕೇಂದ್ರ ಸರ್ಕಾರವು ಹಲವಾರು ಪ್ರಯೋಜನಕಾರಿ ಯೋಜನೆಗಳನ್ನು ಜಾರಿ ಮಾಡುವ ನಿರೀಕ್ಷೆಯನ್ನು ರೈತರು ಹೊಂದಿದ್ದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮಾಸಿಕ ಕಂತಿನ ಮೊತ್ತವನ್ನು ಏರಿಕೆ ಮಾಡುವ ನಿರೀಕ್ಷೆಯನ್ನು ಕೂಡಾ ರೈತರು ಹೊಂದಿದ್ದರು. ಪ್ರಸ್ತುತ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಮಾಸಿಕವಾಗಿ ಎರಡು ಸಾವಿರ ರೂಪಾಯಿಯಂತೆ ವಾರ್ಷಿಕವಾಗಿ ಮೂರು ಕಂತುಗಳಲ್ಲಿ ಆರು ಸಾವಿರ ರೂಪಾಯಿಯನ್ನು ನೀಡಲಾಗುತ್ತಿದೆ. ಆದರೆ ಈ ಮೊತ್ತವನ್ನು ಎಂಟು ಸಾವಿರ ರೂಪಾಯಿಗೆ ಏರಿಕೆ ಮಾಡಬೇಕು ಎಂಬುವುದು ಬೇಡಿಕೆಯಾಗಿತ್ತು. ಈ ಮೊತ್ತವನ್ನು ಎಂಟು ಸಾವಿರಕ್ಕೆ ಏರಿಸಿದಾಗ ನಾಲ್ಕು ಕಂತುಗಳಲ್ಲಿ ಮೊತ್ತವನ್ನು ನೀಡುವ ನಿರೀಕ್ಷೆಯಿತ್ತು.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?



Click it and Unblock the Notifications