ಲಕ್ಷಗಟ್ಟಲೆ ರೈತರಿಗೆ ಸಿಹಿ ಸುದ್ದಿಯನ್ನು ಕೇಂದ್ರ ಸರ್ಕಾರವು ನೀಡಿದೆ. ಹೌದು ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ ಇಕೆವೈಸಿ ಗಡುವನ್ನು ಇನ್ನೂ ಕೆಲವು ತಿಂಗಳುಗಳ ಕಾಲ ವಿಸ್ತರಿಸಿದೆ.
ಪಿಎಂ ಕಿಸಾನ್ ನೋಂದಾಯಿತ ರೈತರಿಗೆ eKYC ಕಡ್ಡಾಯವಾಗಿದೆ. ಹಲವಾರು ಮಂದಿ ಇನ್ನೂ ಕೂಡಾ ಇಕೆವೈಸಿ ಮಾಡಿಕೊಂಡಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಫಲಾನುಭವಿಗಳಿಗೆ ಇಕೆವೈಸಿ ಪೂರ್ಣಗೊಳಿಸಲು ಗಡುವನ್ನು ಈಗ 22 ಮೇ 2022 ರವರೆಗೆ ವಿಸ್ತರಣೆ ಮಾಡಿದೆ.
"ಎಲ್ಲಾ ಪಿಎಂ ಕಿಸಾನ್ ಫಲಾನುಭವಿಗಳಿಗೆ ಇಕೆವೈಸಿಯ ಗಡುವನ್ನು 22 ನೇ ಮೇ 2022 ರವರೆಗೆ ವಿಸ್ತರಿಸಲಾಗಿದೆ," ಎಂದು ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ನೀವು ಕೂಡಾ ಈವರೆಗೆ ಪಿಎಂ ಕಿಸಾನ್ ಇಕೆವೈಸಿ ಮಾಡಿಕೊಂಡಿಲ್ಲವೇ, ಹಾಗಾದರೆ ಈ ಕೆಳಗಿನ ಹಂತಗಳನ್ನು ಪಾಲನೆ ಮಾಡಿ..

ಪಿಎಂ ಕಿಸಾನ್ ಇಕೆವೈಸಿ ಮಾಡುವುದು ಹೇಗೆ?
* ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ
* ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.
* ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ
* ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ
* ಆಧಾರ್ Ekyc ಯ ಪುಟ ತೆರೆಯಲಿದೆ
* ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು
* ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು
* ಬಳಿಕ search ಬಟನ್ ಕ್ಲಿಕ್ ಮಾಡಬೇಕು
* ಅದರ ನಂತರ, ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು
* ಬಳಿಕ Get OTP ಅನ್ನು ಕ್ಲಿಕ್ ಮಾಡಿ
* ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ
* ಒಟಿಪಿಯನ್ನು ನಮೂದಿಸಿ, Submit ಮಾಡಿ
* ನೀವು Submit ಬಟನ್ ಕ್ಲಿಕ್ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು 2019 ರಲ್ಲಿ ಪ್ರಧಾನಿ ಮೋದಿಯವರು ಪ್ರಾರಂಭಿಸಿದರು. ಕೆಲವು ವಿನಾಯಿತಿಗಳಿಗೆ ಒಳಪಟ್ಟು ಕೃಷಿಯೋಗ್ಯ ಭೂಮಿಯೊಂದಿಗೆ ದೇಶಾದ್ಯಂತ ಎಲ್ಲಾ ಭೂಮಾಲೀಕ ರೈತ ಕುಟುಂಬಗಳಿಗೆ ಆದಾಯ ಬೆಂಬಲವನ್ನು ಒದಗಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.
ಯೋಜನೆಯಡಿಯಲ್ಲಿ, ಪ್ರತಿ ವರ್ಷಕ್ಕೆ ರೂ 6000 ಮೊತ್ತವನ್ನು ಮೂರು ನಾಲ್ಕು ಮಾಸಿಕ ಕಂತುಗಳಲ್ಲಿ ತಲಾ ರೂ 2000 ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಒಂದು ಹಣಕಾಸು ವರ್ಷದಲ್ಲಿ, ಪಿಎಂ ಕಿಸಾನ್ ಕಂತು ಮೂರು ಬಾರಿ ಲಭಿಸುತ್ತದೆ. ಅವಧಿ 1 ರಿಂದ ಏಪ್ರಿಲ್-ಜುಲೈ; ಅವಧಿ 2 ಆಗಸ್ಟ್ ನಿಂದ ನವೆಂಬರ್ ವರೆಗೆ; ಮತ್ತು ಅವಧಿ 3 ಡಿಸೆಂಬರ್ ನಿಂದ ಮಾರ್ಚ್ ವರೆಗೆ ಆಗಿರುತ್ತದೆ.


Click it and Unblock the Notifications