ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಲಾಭವನ್ನು ಪಡೆಯುತ್ತಿರುವ ರೈತರಿಗೆ ಸಿಹಿಸುದ್ದಿ ಒಂದಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಇಕೆವೈಸಿ ಮಾಡಿಕೊಳ್ಳದವರಿಗೆ ಇನ್ನೂ ಎರಡು ತಿಂಗಳ ಕಾಲಾವಾಕಾಶವಿದೆ.
ಪಿಎಂ ಕಿಸಾನ್ ಯೋಜನೆಯ ಇಕೆವೈಸಿ C ಅನ್ನು ಪೂರ್ಣಗೊಳಿಸುವ ಗಡುವನ್ನು ಜುಲೈ 31, 2022ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಗಡುವನ್ನು ಮೇ 31, 2022 ಕ್ಕೆ ನಿಗದಿಪಡಿಸಲಾಗಿತ್ತು. ಪಿಎಂ ಕಿಸಾನ್ ಪೋರ್ಟಲ್ ಪ್ರಕಾರ "ಎಲ್ಲಾ ಪಿಎಂ ಕಿಸಾನ್ ಫಲಾನುಭವಿಗಳಿಗೆ ಇಕೆವೈಸಿಯ ಗಡುವನ್ನು 31 ಜುಲೈ 2022 ರವರೆಗೆ ವಿಸ್ತರಣೆ ಮಾಡಲಾಗಿದೆ." ಎರಡು ವಾರದಲ್ಲಿ ಎರಡನೇ ಬಾರಿಗೆ ಸರ್ಕಾರ ಈ ಗಡುವನ್ನು ವಿಸ್ತರಣೆ ಮಾಡಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಅಡಿಯಲ್ಲಿ 11 ನೇ ಕಂತಿನ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಆದರೆ ಇಕೆವೈಸಿ ಮಾಡದೆ ಹಣ ಬಾರದೆ ಇರಬಹುದು ಎಂದು ಹಲವರಲ್ಲಿ ಆತಂಕವಿತ್ತು. ಆದರೆ ಈಗ ಕೇಂದ್ರವು ಇಕೆವೈಸಿ ಅವಧಿ ವಿಸ್ತರಣೆ ಮಾಡಿದೆ.

ಏನಿದು ಯೋಜನೆ?
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು 2018ರಲ್ಲಿ ಪ್ರಧಾನಿ ಮೋದಿಯವರು ಪ್ರಾರಂಭಿಸಿದರು. ಕೆಲವು ವಿನಾಯಿತಿಗಳಿಗೆ ಒಳಪಟ್ಟು ಕೃಷಿಯೋಗ್ಯ ಭೂಮಿಯೊಂದಿಗೆ ದೇಶಾದ್ಯಂತ ಎಲ್ಲಾ ಭೂಮಾಲೀಕ ರೈತ ಕುಟುಂಬಗಳಿಗೆ ಆದಾಯ ಬೆಂಬಲವನ್ನು ಒದಗಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.
ಯೋಜನೆಯಡಿಯಲ್ಲಿ, ಪ್ರತಿ ವರ್ಷಕ್ಕೆ ರೂ 6000 ಮೊತ್ತವನ್ನು ಮೂರು ನಾಲ್ಕು ಮಾಸಿಕ ಕಂತುಗಳಲ್ಲಿ ತಲಾ ರೂ 2000 ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಒಂದು ಹಣಕಾಸು ವರ್ಷದಲ್ಲಿ, ಪಿಎಂ ಕಿಸಾನ್ ಕಂತು ಮೂರು ಬಾರಿ ಲಭಿಸುತ್ತದೆ. ಅವಧಿ 1 ರಿಂದ ಏಪ್ರಿಲ್-ಜುಲೈ; ಅವಧಿ 2 ಆಗಸ್ಟ್ ನಿಂದ ನವೆಂಬರ್ ವರೆಗೆ; ಮತ್ತು ಅವಧಿ 3 ಡಿಸೆಂಬರ್ ನಿಂದ ಮಾರ್ಚ್ ವರೆಗೆ ಆಗಿರುತ್ತದೆ.
ಇಕೆವೈಸಿ ಹೇಗೆ ಮಾಡುವುದು?
* ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ
* ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.
* ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ
* ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ * ಆಧಾರ್ Ekyc ಯ ಪುಟ ತೆರೆಯಲಿದೆ
* ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು
* ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು
* ಬಳಿಕ search ಬಟನ್ ಕ್ಲಿಕ್ ಮಾಡಬೇಕು
* ಅದರ ನಂತರ, ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು
* ಬಳಿಕ Get OTP ಅನ್ನು ಕ್ಲಿಕ್ ಮಾಡಿ
* ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ
* ಒಟಿಪಿಯನ್ನು ನಮೂದಿಸಿ, Submit ಮಾಡಿ
* ನೀವು Submit ಬಟನ್ ಕ್ಲಿಕ್ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ


Click it and Unblock the Notifications