ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ 15 ರ ಬುಧವಾರದಂದು ಸುಮಾರು 8.5 ಕೋಟಿ ಅರ್ಹ ರೈತರಿಗೆ 18,000 ಕೋಟಿ ರೂಪಾಯಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದರು. ಈಗ ಪಿಎಂ ಕಿಸಾನ್ ಫಲಾನುಭವಿಗಳಿಗೆ ಕಂತಿನ ಮೊತ್ತವನ್ನು ಹೆಚ್ಚಿಸುವ ಘೋಷಣೆಯನ್ನು ಮಾಡಿದ್ದಾರೆ.
ಹೌದು, ಪಿಎಂ ಕಿಸಾನ್ ಯೋಜನೆಯಡಿಯಲ್ಲಿ, ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂಪಾಯಿಗಳನ್ನು ಪಡೆಯಬಹುದಾಗಿದೆ. ಅಂದರೆ ವಾರ್ಷಿಕವಾಗಿ ಒಟ್ಟಾಗಿ 6,000 ರೂಪಾಯಿ ಹಣವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಆದರೆ ಈ ಮೊತ್ತವನ್ನು 12 ಸಾವಿರ ರೂಪಾಯಿಗೆ ಏರಿಸಲಾಗುತ್ತದೆ. ಆದರೆ ಈ ಒಂದು ರಾಜ್ಯದ ರೈತರಿಗೆ ಮಾತ್ರ ಇದು ಅನ್ವಯವಾಗುತ್ತದೆ. ಈ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ...

ಯಾವ ರಾಜ್ಯದ ರೈತರಿಗೆ ಅನ್ವಯ?
ರಾಜಸ್ಥಾನದಲ್ಲಿ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿರುವ ರಾಜಸ್ಥಾನದ ರೈತರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ರಾಜ್ಯ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ವರ್ಷಕ್ಕೆ 12,000 ರೂಪಾಯಿ ನೀಡಲಿದೆ ಎಂದು ಪ್ರಧಾನಿ ಮೋದಿ ರಾಜಸ್ಥಾನದ ರೈತರಿಗೆ ತಿಳಿಸಿದ್ದಾರೆ.
ರಾಜಸ್ಥಾನದ ಹನುಮಾನ್‌ಗಢದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರೈತರಿಗೆ ಮೋಸ ಮಾಡಿದವರನ್ನು ಬಿಡಲಾಗುವುದಿಲ್ಲ. ರಾಜಸ್ಥಾನ ಬಿಜೆಪಿಯು ರೈತರಿಂದ ಎಂಎಸ್‌ಪಿ ಮೇಲೆ ಬೆಳೆಗಳನ್ನು ಖರೀದಿಸಲು ನಿರ್ಧರಿಸಿದೆ. ಇದು ಮಾತ್ರವಲ್ಲದೆ ಪಕ್ಷ ಅಧಿಕಾರಕ್ಕೆ ಬಂದರೆ ಬೋನಸ್ ಅನ್ನು ರೈತರಿಗೂ ಸಹ ನೀಡಲಾಗುವುದು ಎಂದು ಹೇಳಿದರು.
"ಇನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ರೈತರಿಗೆ ಈ ಹಿಂದೆ ವಾರ್ಷಿಕವಾಗಿ ಆರು ಸಾವಿರ ರೂಪಾಯಿ ನೀಡಲಾಗುತ್ತಿತ್ತು. ಆದರೆ ಈ ಮೊತ್ತವನ್ನು ಹನ್ನೆರಡು ಸಾವಿರ ರೂಪಾಯಿಗೆ ಏರಿಸಲು ರಾಜಸ್ಥಾನ ಬಿಜೆಪಿ ನಿರ್ಧರಿಸಿದೆ," ಎಂದು ಪ್ರಧಾನಿ ಮೋದಿ ಹೇಳಿದರು. ಪ್ರಧಾನಿ ಮೋದಿ ಮತ್ತೊಂದು ಭರವಸೆ ನೀಡಿದ್ದು, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುವುದು ಎಂದು ಹೇಳಿದರು.
ಖಾತೆಗೆ ಹಣ ಬಂದಿದೆಯೇ ಚೆಕ್ ಮಾಡಿ
ಹಂತ 1: ಮೊದಲು PM ಕಿಸಾನ್ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡಿ
ಹಂತ 2: ಬಲ ಭಾಗದಲ್ಲಿರುವ Know Your Status ಮೇಲೆ ಕ್ಲಿಕ್ ಮಾಡಿಕೊಳ್ಳಿ.
ಹಂತ 3: ನಿಮ್ಮ ರಿಜಿಸ್ಟ್ರೇಷನ್ ಸಂಖ್ಯೆಯನ್ನು, ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ, Get Data ಎಂಬುವುದನ್ನು ಆಯ್ಕೆ ಮಾಡಿ
ಹಂತ 4: ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ
ಏನಿದು ಪಿಎಂ ಕಿಸಾನ್ ಯೋಜನೆ?
ಅರ್ಹ ರೈತರು ಪಿಎಂ ಕಿಸಾನ್ ಯೋಜನೆಯಡಿಯಲ್ಲಿ, ಪ್ರತಿ ನಾಲ್ಕು ತಿಂಗಳಿಗೊಮ್ಮೆ ಎರಡು ಸಾವಿಯ ರೂಪಾಯಿಗಳನ್ನು ಪಡೆಯಬಹುದಾಗಿದೆ. ಅಂದರೆ ವಾರ್ಷಿಕವಾಗಿ ಒಟ್ಟಾಗಿ ರೈತರು ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಆರು ಸಾವಿರ ರೂಪಾಯಿ ಹಣವನ್ನು ಪಡೆಯಬಹುದು. ಪ್ರತಿ ವರ್ಷ ಮೂರು ಕಂತುಗಳಲ್ಲಿ ಈ ಹಣವನ್ನು ನೀಡಲಾಗುತ್ತದೆ.
ಸಾಮಾನ್ಯವಾಗಿ ಈ ಮೂರು ಕಂತುಗಳಲ್ಲಿ ಮೊದಲ ಕಂತನ್ನು ಏಪ್ರಿಲ್-ಜುಲೈ ನಡುವೆ, ಎರಡನೇ ಕಂತನ್ನು ಆಗಸ್ಟ್-ನವೆಂಬರ್ ನಡುವೆ ಮತ್ತು ಮೂರನೇ ಕಂತನ್ನು ಡಿಸೆಂಬರ್-ಮಾರ್ಚ್ ನಡುವೆ ಜಮೆ ಮಾಡಲಾಗುತ್ತದೆ. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಈ ಯೋಜನೆಯನ್ನು ಫೆಬ್ರವರಿ 2019 ರಲ್ಲಿ ಪ್ರಾರಂಭಿಸಲಾಯಿತು.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications