ಕಾತರದಿಂದ ಕಾಯುತ್ತಿರುವ ಪಿಎಂ ಕಿಸಾನ್ ಯೋಜನೆಯ (ಪಿಎಂ ಕಿಸಾನ್) 15 ನೇ ಕಂತನ್ನು ಬಿಡುಗಡೆ ಮಾಡುವ ದಿನಾಂಕ ಬಹಿರಂಗವಾಗಿದೆ. ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನವೆಂಬರ್ 15, 2023 ರಂದು ನೇರವಾಗಿ ಪಿಎಂ ಕಿಸಾನ್ ಮೊತ್ತವನ್ನು ಜಮೆ ಮಾಡಲಾಗುತ್ತದೆ.
ಈ ಕಂತಿನ ಮೊತ್ತವು ಭಾರತದಾದ್ಯಂತ 8 ಕೋಟಿಗೂ ಹೆಚ್ಚು ರೈತರಿಗೆ ಆರ್ಥಿಕ ಸಹಾಯವನ್ನು ಒದಗಿಸುತ್ತದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 15 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 15, 2023 ರಂದು ದೇಶದ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ವರ್ಗಾಯಿಸುತ್ತಾರೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ, ಎಲ್ಲಾ ಭೂಹಿಡುವಳಿ ರೈತರ ಕುಟುಂಬಗಳಿಗೆ ವಾರ್ಷಿಕವಾಗಿ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ನೀಡಲಾಗುತ್ತದೆ. ಇದನ್ನು ಮೂರು ಸಮಾನ ಕಂತುಗಳಲ್ಲಿ 2,000 ರೂಪಾಯಿಯಂತೆ ಪಾವತಿಸಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಜುಲೈ 27 ರಂದು ಸುಮಾರು 8.5 ಕೋಟಿ ಅರ್ಹ ರೈತರಿಗೆ 17,000 ಕೋಟಿ ರೂಪಾಯಿ ಮೌಲ್ಯದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (ಪಿಎಂ-ಕಿಸಾನ್) 14 ನೇ ಕಂತನ್ನು ಬಿಡುಗಡೆ ಮಾಡಿದರು. ರಾಜಸ್ಥಾನದ ಸಿಕಾರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಘೋಷಣೆ ಮಾಡಲಾಗಿದೆ.
ಸ್ಟೇಟಸ್ ಪರಿಶೀಲನೆ ಮಾಡುವುದು ಹೇಗೆ?
ಹಂತ 1: ಮೊದಲು PM ಕಿಸಾನ್ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡಿ
ಹಂತ 2: ಬಲ ಭಾಗದಲ್ಲಿರುವ Know Your Status ಮೇಲೆ ಕ್ಲಿಕ್ ಮಾಡಿಕೊಳ್ಳಿ.
ಹಂತ 3: ನಿಮ್ಮ ರಿಜಿಸ್ಟ್ರೇಷನ್ ಸಂಖ್ಯೆಯನ್ನು, ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ, Get Data ಎಂಬುವುದನ್ನು ಆಯ್ಕೆ ಮಾಡಿ
ಹಂತ 4: ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ
ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ
ಹಂತ 1: ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ
ಹಂತ 2: Beneficiary list ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
ಹಂತ 3: ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಹಳ್ಳಿಯಂತಹ ವಿವರಗಳನ್ನು ಆಯ್ಕೆಮಾಡಿ
ಹಂತ 4: Get report ಟ್ಯಾಬ್ ಮೇಲೆ ಕ್ಲಿಕ್ ಮಾಡಿ
'ಪಿಎಂ-ಕಿಸಾನ್ ಯೋಜನೆ'ಗೆ ಹೀಗೆ ಸೇರಿಕೊಳ್ಳಿ
ಹಂತ 1: pmkisan.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು Farmers Corner ಮೇಲೆ ಕ್ಲಿಕ್ ಮಾಡಿ
ಹಂತ 2: New Farmer Registration ಮೇಲೆ ಕ್ಲಿಕ್ ಮಾಡಿ, ಆಧಾರ್ ಸಂಖ್ಯೆ, ಕ್ಯಾಪ್ಚಾ ಭರ್ತಿ ಮಾಡಿ
ಹಂತ 3: ಎಲ್ಲ ವಿವರಗಳನ್ನು ನಮೂದಿಸಿ, Yes ಎಂದು ಕ್ಲಿಕ್ ಮಾಡಿ
ಹಂತ 4: ಪಿಎಂ ಕಿಸಾನ್ ಅರ್ಜಿ ನಮೂನೆ 2023 ರಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ, ಸೇವ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.


Click it and Unblock the Notifications