ಕೋಟ್ಯಂತರ ಫಲಾನುಭವಿ ರೈತರು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತಿನ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಈ ನಡುವೆ 15 ನೇ ಕಂತು ದೀಪಾವಳಿಯ ಮೊದಲು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. 8 ಕೋಟಿ ರೂಪಾಯಿಗೂ ಹೆಚ್ಚು ರೈತರು ಈಗ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 15 ನೇ ಕಂತು ಪಡೆಯಲು ಕಾಯುತ್ತಿದ್ದಾರೆ.
ಈ ಮೊತ್ತವನ್ನು ನವೆಂಬರ್ 12 ರಂದು ವಿತರಿಸಲಾಗುವುದು. ದೀಪಾವಳಿಯ ಮೊದಲು ರೈತರ ಖಾತೆಗಳಿಗೆ ಹಣವನ್ನು ಕಳುಹಿಸುವುದು ಕೇಂದ್ರದ ಯೋಜನೆಯಾಗಿದೆ ಎಂದು ಝೀ ನ್ಯೂಸ್ ವರದಿ ಮಾಡಿದೆ. ಇನ್ನು ಪಿಎಂ ಕಿಸಾನ್ ಯೋಜನೆಯ 14 ನೇ ಕಂತು ಜುಲೈನಲ್ಲಿ ಬಿಡುಗಡೆಯಾಗಿದೆ.

ಆದರೆ ಈ ಹಿಂದೆಯೂ ಹಲವಾರು ಮಂದಿಗೆ ಪಿಎಂ ಕಿಸಾನ್ ನಿಧಿ ಮೊತ್ತವು ಜಮೆಯಾಗಿಲ್ಲ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಪಡೆಯಬೇಕಾದರೆ, ಇಕೆವೈಸಿ ಅನ್ನು ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ, ಯೋಜನೆಯ ಪ್ರಯೋಜನಗಳಿಂದ ವಂಚಿತರಾಗುತ್ತಾರೆ.
ಕೆವೈಸಿ ಮಾಡಿಕೊಳ್ಳುವುದು ಹೇಗೆ?
ಹಂತ 1: ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ
ಹಂತ 2: ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.
ಹಂತ 3: ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ
ಹಂತ 4: ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ, ಆಧಾರ್ Ekyc ಯ ಪುಟ ತೆರೆಯಲಿದೆ
ಹಂತ 5: ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು
ಹಂತ 6: ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು
ಹಂತ 7: ಬಳಿಕ search ಬಟನ್ ಕ್ಲಿಕ್ ಮಾಡಬೇಕು
ಹಂತ 8: ಅದರ ನಂತರ, ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು
ಹಂತ 9: ಬಳಿಕ Get OTP ಅನ್ನು ಕ್ಲಿಕ್ ಮಾಡಿ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ
ಹಂತ 10: ಒಟಿಪಿಯನ್ನು ನಮೂದಿಸಿ, Submit ಮಾಡಿ
ಹಂತ 11: ನೀವು Submit ಬಟನ್ ಕ್ಲಿಕ್ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ
ಸ್ಟೇಟಸ್ ಪರಿಶೀಲನೆ ಮಾಡುವುದು ಹೇಗೆ?
ಹಂತ 1: ಮೊದಲು PM ಕಿಸಾನ್ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ
ಹಂತ 2: ಬಳಿಕ Farmers Corner ಮೇಲೆ ಕ್ಲಿಕ್ ಮಾಡಿ
ಹಂತ 3: ನಂತರ Beneficiary Status ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರದ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ
ಹಂತ 5: ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ
ಏನಿದು ಪಿಎಂ ಕಿಸಾನ್ ಯೋಜನೆ?
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ರೈತರಿಗೆ ಆರ್ಥಿಕ ನೆರವು ನೀಡುವ ಮೂಲಕ ಸಹಾಯ ಮಾಡಲು ಕೇಂದ್ರದ ಉಪಕ್ರಮವಾಗಿದೆ. ಪಿಎಂ ಮೋದಿ ಈ ಕೇಂದ್ರ ಯೋಜನೆಯನ್ನು ಫೆಬ್ರವರಿ 24, 2019 ರಂದು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಪ್ರಾರಂಭಿಸಿದರು.
ಯೋಜನೆಯ ಭಾಗವಾಗಿ, ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರತಿ ವರ್ಷಕ್ಕೆ ಆರು ಸಾವಿರ ರೂಪಾಯಿ ಆದಾಯ ಬೆಂಬಲವನ್ನು ತಲಾ 2000 ರೂಪಾಯಿಯಂತೆ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಈ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್‌ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications