ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಭಾರತೀಯ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಲ್ಲಿ ರೈತರಿಗೆ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿ ನೀಡಲಾಗುತ್ತದೆ. ಅಂದರೆ ವಾರ್ಷಿಕವಾಗಿ 6 ಸಾವಿರ ರೂಪಾಯಿ ನೀಡಲಾಗುತ್ತದೆ.
ಅರ್ಹ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 12ನೇ ಕಂತನ್ನು ಬಿಡುಗಡೆ ಮಾಡಿದೆ. ಈಗ ರೈತರು 13ನೇ ಕಂತು ಜಮೆಯಾಗುವುದಕ್ಕೆ ಕಾತುರದಿಂದ ಕಾಯುತ್ತಿದ್ದಾರೆ. ಶೀಘ್ರವೇ 13ನೇ ಕಂತು ಜಮೆಯಾಗುವ ಸಾಧ್ಯತೆಯಿದೆ. ಮಾಹಿತಿ ಪ್ರಕಾರ ಫೆಬ್ರವರಿ 24ರಂದು ಕಿಸಾನ್ ಸಮ್ಮಾನ್ ನಿಧಿಯ ಮೊತ್ತವು ಲಭ್ಯವಾಗಲಿದೆ.
ಯಾವ ರೈತರಿಗೆ ಈ ಯೋಜನೆಯಡಿಯಲ್ಲಿ ಮೊತ್ತ ಲಭ್ಯವಾಗುವುದಿಲ್ಲವೋ, ಅವರು ಹಣ ಲಭ್ಯವಾಗಬೇಕಾದರೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ವೆಬ್‌ಸೈಟ್‌ನಲ್ಲಿ ರಿಜಿಸ್ಟಾರ್ ಮಾಡುವುದು ಮುಖ್ಯವಾಗಿದೆ. ಆದರೆ ಎಲ್ಲ ರೈತರು ಕೂಡಾ ಈ ಯೋಜನೆಯಡಿಯಲ್ಲಿ ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಇನ್ನು ಕೆವೈಸಿ ಮಾಡದಿದ್ದರೂ ಕೂಡಾ ಮೊತ್ತ ಲಭ್ಯವಾಗುವುದಿಲ್ಲ, ಈ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ....

ಯಾರಿಗೆ ಮೊತ್ತ ಲಭ್ಯವಾಗುವುದಿಲ್ಲ?
ಬಿಹಾರ ಕೃಷಿ ಇಲಾಖೆಯ ವೆಬ್‌ಸೈಟ್ ಪ್ರಕಾರ, ರೈತರ ಬ್ಯಾಂಕ್ ಖಾತೆಯು ಆಧಾರ್ ಮತ್ತು ಎನ್‌ಪಿಸಿಐನೊಂದಿಗೆ ಲಿಂಕ್ ಆಗದಿದ್ದರೆ, ಯಾವುದೇ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಮುಂದಿನ ಕಂತನ್ನು ಪಡೆಯಬೇಕಾದರೆ, ರೈತರು ಅಂಚೆ ಕಚೇರಿಯಲ್ಲಿ ಡಿಬಿಟಿ ಎನೇಬೆಲ್ಡ್ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ಖಾತೆಯನ್ನು ಹೊಂದಿರಬೇಕಾಗುತ್ತದೆ.
ಹಾಗೆಯೇ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಪ್ರಯೋಜನವನ್ನು ಪಡೆಯಬೇಕಾದರೆ ಇಕೆವೈಸಿ ಮಾಡುವುದು ಮುಖ್ಯವಾಗಿದೆ. ಪಿಎಂ ಕಿಸಾನ್ ಪೋರ್ಟಲ್ ಮೂಲಕ ಖಾತೆಗೆ ಆಧಾರ್ ಲಿಂಕ್ ಮಾಡುವುದು ಮುಖ್ಯವಾಗಿದೆ. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸುವ ಮೂಲಕ ಇಕೆವೈಸಿ ಅಪ್‌ಡೇಟ್ ಮಾಡಿಕೊಳ್ಳಬಹುದು. ಇನ್ನು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರುವುದು ಮುಖ್ಯವಾಗಿದೆ.
ಇಕೆವೈಸಿ ಮಾಡುವುದು ಹೇಗೆ?
ಹಂತ 1: ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ
ಹಂತ 2: ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.
ಹಂತ 3: ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ
ಹಂತ 4: ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ, ಆಧಾರ್ Ekyc ಯ ಪುಟ ತೆರೆಯಲಿದೆ
ಹಂತ 5: ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು
ಹಂತ 6: ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು
ಹಂತ 7: ಬಳಿಕ search ಬಟನ್ ಕ್ಲಿಕ್ ಮಾಡಬೇಕು
ಹಂತ 8: ಅದರ ನಂತರ, ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು
ಹಂತ 9: ಬಳಿಕ Get OTP ಅನ್ನು ಕ್ಲಿಕ್ ಮಾಡಿ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ
ಹಂತ 10: ಒಟಿಪಿಯನ್ನು ನಮೂದಿಸಿ, Submit ಮಾಡಿ
ಹಂತ 11: ನೀವು Submit ಬಟನ್ ಕ್ಲಿಕ್ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications