ಮುಂಬರುವ ದಿನಗಳಲ್ಲಿ ಸಾರ್ವಜನಿಕ ಭವಿಷ್ಯ ನಿಧಿ(ಪಿಪಿಎಫ್), ಹಾಗೂ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಕಡಿತವಾಗುವ ಸಾಧ್ಯತೆ ಇದೆ ಎಂದು ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಸಣ್ಣ ಉಳಿತಾಯ ದರಗಳಲ್ಲಿ ಸ್ವಲ್ಪ ಮಿತವಾಗಿರಬಹುದು ಎಂಬ ಸುಳಿವನ್ನು ನೀಡಿದ್ದಾರೆ. ಜನವರಿಯಿಂದ ಮಾರ್ಚ್‌ವರೆಗೆ ಈ ತ್ರೈಮಾಸಿಕದಲ್ಲಿ ಬ್ಯಾಂಕ್ ಠೇವಣಿಗಳನ್ನು ಮಧ್ಯಮಗೊಳಿಸಿದರೂ, ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳಲ್ಲಿ ಬಡ್ಡಿದರಗಳನ್ನು ಸರ್ಕಾರ ಸ್ಥಿರವಾಗಿರಿಸಿಕೊಂಡಿತ್ತು. ಆದರೆ ಕೆಲವು ಸಣ್ಣ ಬ್ಯಾಂಕರ್‌ಗಳು ಸಣ್ಣ ಉಳಿತಾಯ ಯೋಜನೆಗಳಲ್ಲಿ ಠೇವಣಿ ಹೆಚ್ಚಿರುವುದರಿಂದ ಬಡ್ಡಿ ದರಗಳನ್ನು ತಕ್ಷಣವೇ ಕಡಿತಗೊಳಿಸುವುದನ್ನು ನಿಷೇಧಿಸುತ್ತೇವೆ ಎಂದು ಹೇಳಿಕೊಂಡಿವೆ.

'' ಭಾರತದಲ್ಲಿ ಇದೀಗ ನಾವು ಸಣ್ಣ ಉಳಿತಾಯ ಯೋಜನೆಗಳಲ್ಲಿ 12 ಲಕ್ಷ ಕೋಟಿ ರುಪಾಯಿ ಮತ್ತು ಬ್ಯಾಂಕುಗಳಲ್ಲಿ ಸರಿಸುಮಾರು 114 ಲಕ್ಷ ಕೋಟಿ ರುಪಾಯಿಯನ್ನು ಹೊಂದಿದ್ದೇವೆ. ಆದ್ದರಿಂದ ಬ್ಯಾಂಕುಗಳ ಹೊಣೆಗಾರಿಕೆಯ ಭಾಗವು 12 ಲಕ್ಷ ಕೋಟಿಯಿಂದ ಪ್ರಭಾವಿತವಾಗುತ್ತದೆ ''ಎಂದು ಆರ್ಥಿಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಅತಾನು ಚಕ್ರವರ್ತಿ ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ತಿಳಿಸಿದ್ದಾರೆ.
ಪ್ರಸ್ತುತ, ಪಿಪಿಎಫ್ ಮತ್ತು ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳು ಅಥವಾ ಎನ್‌ಎಸ್‌ಸಿ ವಾರ್ಷಿಕವಾಗಿ 7.9 ಪರ್ಸೆಂಟ್ ಬಡ್ಡಿದರವನ್ನು ಹೊಂದಿವೆ. ಆದರೆ 5 ವರ್ಷದ ಎಸ್‌ಬಿಐ ಫಿಕ್ಸೆಡ್ ಡೆಪಾಸಿಟ್‌ಗೆ ಹೋಲಿಸಿದರೆ ಕೇವಲ 6.1 ಪರ್ಸೆಂಟ್ ನಷ್ಟಿದೆ. ಸುಕನ್ಯಾ ಸಮೃದ್ಧಿ ಖಾತೆ ಮತ್ತು ಹಿರಿಯ ನಾಗರಿಕ ಉಳಿತಾಯ ಯೋಜನೆ, ಇತರ ಸಣ್ಣ ಉಳಿತಾಯ ಯೋಜನೆಗಳಿಗಿಂತ ಹೆಚ್ಚಿನ ದರವನ್ನು ನೀಡುತ್ತದೆ. ಹೆಣ್ಣು ಮಕ್ಕಳ ಉಳಿತಾಯ ಯೋಜನೆ ಸುಕನ್ಯಾ ಸಮೃದ್ಧಿ ಖಾತೆಯು 8.4 ಪರ್ಸೆಂಟ್ ವಾರ್ಷಿಕವಾಗಿ ಸಂಯೋಜಿಸಲ್ಪಟ್ಟಿದೆ. ಐದು ವರ್ಷಗಳ ಹಿರಿಯ ನಾಗರೀಕರ ಉಳಿತಾಯ ಯೋಜನೆ 8.6 ಪರ್ಸೆಂಟ್ ಬಡ್ಡಿದರವನ್ನು ನೀಡುತ್ತದೆ.
ಏಪ್ರಿಲ್ 2016 ರಿಂದ, ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ತ್ರೈಮಾಸಿಕ ಆಧಾರದ ಮೇಲೆ ಪರಿಷ್ಕರಿಸಲಾಗುತ್ತಿದೆ. ಆದಾಗ್ಯೂ, ಶ್ಯಾಮಲಾ ಗೋಪಿನಾಥ್ ಸಮಿತಿಯು ಶಿಫಾರಸು ಮಾಡಿದಂತೆ ಸರ್ಕಾರಿ ಭದ್ರತೆಗಳ ಮೇಲೆ ಹೋಲಿಸಬಹುದಾದ ಇಳುವರಿಯನ್ನು ಆಧರಿಸಿ ಸಣ್ಣ ಉಳಿತಾಯ ದರಗಳನ್ನು ನಿಗದಿಪಡಿಸುವ ಈ ಸೂತ್ರವನ್ನು ಕೆಲವು ಭಾಗಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗಿಲ್ಲ.
More From GoodReturns

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ



Click it and Unblock the Notifications