ಕರ್ನಾಟಕದಲ್ಲಿ ಆಸ್ತಿ ನೋಂದಣಿ ಇನ್ನು ಮುಂದೆ ಸರಳವಾಗಲಿದೆ. ನವೆಂಬರ್ 1ರಿಂದ ರಾಜ್ಯದಲ್ಲಿ ಆಸ್ತಿ ನೋಂದಣಿಗೆ ಯಾವುದೇ ತೊಂದರೆ ಇರುವುದಿಲ್ಲ. ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಸ್ತಿಗಳ ತಡೆರಹಿತ ನೋಂದಣಿಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಕಾವೇರಿ 2.0 ಎಂಬ ಸಾಫ್ಟ್‌ವೇರ್ ಅನ್ನು ಪ್ರಾರಂಭಿಸಲು ಸಜ್ಜಾಗಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿರುವ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಜನಸ್ನೇಹಿ ಹಾಗೂ ಇಲಾಖೆ ಸ್ನೇಹಿಯಾಗಿರುವ ಈ ನೂತನ ತಂತ್ರಾಂಶವನ್ನು ಪರೀಕ್ಷಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ನವೆಂಬರ್ 1ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ.
ಸಾಫ್ಟ್‌ವೇರ್‌ನಲ್ಲಿ ಜನರು ನೋಂದಾಯಿಸಿಕೊಳ್ಳಲು ಆಸ್ತಿಯ ದಾಖಲೆಗಳನ್ನು ಅಪ್‌ಲೋಡ್ ಮಾಡಬಹುದು. ಸ್ಟ್ಯಾಂಪ್ ಡ್ಯೂಟಿ ಮತ್ತು ಇತರ ಶುಲ್ಕಗಳನ್ನು ಆನ್‌ಲೈನ್‌ನಲ್ಲಿ ಪಾವತಿಸಬಹುದು. ನಂತರ, ಅವರು ತಮಗೆ ಅನುಕೂಲಕರವಾದ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಬಹುದು. ಬಯೋಮೆಟ್ರಿಕ್ ವಿವರಗಳನ್ನು ನೀಡಲು ತಮ್ಮ ಆಯ್ಕೆಯ ಸಬ್-ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಬಹುದು. ಒಮ್ಮೆ ಕಚೇರಿಗೆ ಭೇಟಿ ನೀಡಿದರೆ 5-10 ನಿಮಿಷಗಳಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.

"ಆಸ್ತಿ ವಿವರಗಳು ಮತ್ತು ಪ್ರದೇಶವನ್ನು ಆಧರಿಸಿ, ಖರೀದಿದಾರರು ಪಾವತಿಸಬೇಕಾದ ಶುಲ್ಕವನ್ನು ಸ್ವಯಂಚಾಲಿತವಾಗಿ ಲೆಕ್ಕಾಚಾರ ಮಾಡುವ ರೀತಿಯಲ್ಲಿ ಸಾಫ್ಟ್‌ವೇರ್ ಅನ್ನು ವಿನ್ಯಾಸಗೊಳಿಸಲಾಗಿದೆ. ಹಾಗೆಯೇ ಮೂರನೇ ವ್ಯಕ್ತಿಯ ಮೇಲಿನ ಅವಲಂಬನೆ ಇಲ್ಲದಂತೆ ಮಾಡುತ್ತದೆ," ಎಂದು ಕೂಡಾ ಕರ್ನಾಟಕ ಕಂದಾಯ ಸಚಿವರು ವಿವರಿಸಿದ್ದಾರೆ.
ತಾಂತ್ರಿಕ ದೋಷವಿಲ್ಲ
ನೋಂದಣಿಯ ನಂತರ, ಆಸ್ತಿ ದಾಖಲೆಗಳನ್ನು ಖರೀದಿದಾರರ ಡಿಜಿ-ಲಾಕರ್‌ಗಳಿಗೆ ಕಳುಹಿಸಲಾಗುತ್ತದೆ. ಜೊತೆಗೆ ಅವರ ಮೊಬೈಲ್ ಫೋನ್‌ಗಳ ಮೂಲಕ ಅಪ್‌ಡೇಟ್‌ಗಳನ್ನು ಕಳುಹಿಸಲಾಗುತ್ತದೆ. "ಪ್ರಸ್ತುತ, ತಾಂತ್ರಿಕ ದೋಷಗಳಿಂದಾಗಿ ಜನರು ಸಬ್-ರಿಜಿಸ್ಟ್ರಾರ್ ಕಚೇರಿಗಳಿಗೆ ಹಲವಾರು ಬಾರಿ ಭೇಟಿ ನೀಡಬೇಕಾಗಿದೆ. ಹೊಸ ಸಾಫ್ಟ್‌ವೇರ್‌ನಿಂದ, ಇದು ಕೇಂದ್ರೀಕೃತ ಅಪ್ಲಿಕೇಶನ್ ಆಗಿರುವುದರಿಂದ ಈ ಸಮಸ್ಯೆಗಳು ಇರುವುದಿಲ್ಲ. ಯಾವುದೇ ಸಮಸ್ಯೆಗಳಿದ್ದರೂ, ಅವುಗಳನ್ನು ತ್ವರಿತವಾಗಿ ಮತ್ತು ಸುಲಭವಾಗಿ ಸರಿಪಡಿಸಬಹುದು," ಎಂದು ಕಂದಾಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಆಸ್ತಿ ಖರೀದಿಯಲ್ಲಿ ವಂಚನೆ ತಡೆಯಲು ಸರ್ಕಾರದ ಕ್ರಮ
ಆಸ್ತಿ ಖರೀದಿದಾರರು ವಂಚನೆಗೆ ಒಳಗಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿಯೂ ಸರ್ಕಾರ ಕ್ರಮವನ್ನು ಕೈಗೊಳ್ಳಲಿದೆ. ಸರ್ಕಾರವು ಶೀಘ್ರದಲ್ಲೇ ಎಲ್ಲಾ ತಾಲೂಕುಗಳಲ್ಲಿ ಆಸ್ತಿ ದಾಖಲೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಏಜೆನ್ಸಿಗಳನ್ನು ಸ್ಥಾಪಿಸಲಿದೆ ಎಂದು ಕೂಡಾ ಸಚಿವರು ತಿಳಿಸಿದ್ದಾರೆ. ಈ ಏಜೆನ್ಸಿಗಳು ದಾಖಲೆಗಳನ್ನು ಪರಿಶೀಲಿಸುತ್ತವೆ ಮತ್ತು ಅವು ನಿಜವೇ ಅಥವಾ ಇಲ್ಲವೇ ಎಂದು ಖರೀದಿದಾರರಿಗೆ ತಿಳಿಸುತ್ತವೆ. ಯಾವುದೇ ಕಾನೂನು ಪ್ರಕರಣಗಳು ಇದ್ದರೆ ಅದರ ಬಗ್ಗೆ ಮಾಹಿತಿ ನೀಡುತ್ತಾರೆ. ಖರೀದಿದಾರರಿಗೆ ಕನಿಷ್ಠ ಮೊತ್ತ ಎಷ್ಟೆಂದು ತಿಳಿಸುತ್ತಾರೆ ಎಂದು ಹೇಳಿದರು.
"ಈ ಏಜೆನ್ಸಿಗಳು ಸರ್ಕಾರದಿಂದ ನಡೆಸಲ್ಪಡುವುದರಿಂದ, ಹೆಚ್ಚು ನಂಬಿಕೆಗೆ ಅರ್ಹವಾಗಿದೆ. ಇದು ಖರೀದಿದಾರರು ದೊಡ್ಡ ಮೊತ್ತವನ್ನು ಖರ್ಚು ಮಾಡುವ ಮೂಲಕ ಖಾಸಗಿ ಕಂಪನಿಗಳಿಂದ ಕಾನೂನು ಅಭಿಪ್ರಾಯವನ್ನು ಪಡೆಯುವುದನ್ನು ತಡೆಯುತ್ತದೆ," ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು.


Click it and Unblock the Notifications