ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2023-2024 ಹಣಕಾಸು ವರ್ಷದ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ. ಅದರ ನಡುವೆಯೇ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಲಕ್ಷಾಂತರ ಮಂದಿ ರೈತರು ಈ ಯೋಜನೆಯ ಮೊತ್ತವನ್ನು ಕೇಂದ್ರ ಸರ್ಕಾರ ಏರಿಸಬಹುದು ಎಂಬ ನಿರೀಕ್ಷೆಯನ್ನು ಹೊಂದಿದ್ದಾರೆ..
ಪ್ರಧಾನ ಮಂತ್ರಿ ಸಮ್ಮಾನ್ ನಿಧಿ ಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದೆ. 2019ರಲ್ಲಿ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಆರಂಭ ಮಾಡಿದೆ. ದೇಶದ ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಈ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿ ಮಾಡಿದೆ.
ಈ ಯೋಜನೆಯಡಿಯಲ್ಲಿ ರೈತರಿಗೆ ಕೇಂದ್ರ ಸರ್ಕಾರವು ವಾರ್ಷಿಕವಾಗಿ 6 ಸಾವಿರ ರೂಪಾಯಿ ಹಣಕಾಸು ಸಹಾಯವನ್ನು ಮಾಡುತ್ತದೆ. ವಾರ್ಷಿಕವಾಗಿ 6 ಸಾವಿರ ರೂಪಾಯಿಯನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತಿದೆ. ಪ್ರತಿ ಕಂತಿನಲ್ಲಿ 2 ಸಾವಿರ ರೂಪಾಯಿ ನೀಡಲಾಗುತ್ತದೆ. ಮೂರು ಕಂತಿನಲ್ಲಿ ಎರಡು ಸಾವಿರದಂತೆ ಆರು ಸಾವಿ ರೂಪಾಯಿ ನೀಡಲಾಗುತ್ತದೆ. ಆದರೆ ಈ ಕಂತನ್ನು ಏರಿಸುವ ನಿರೀಕ್ಷೆಯನ್ನು ರೈತರು ಹೊಂದಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ...
ಬಜೆಟ್ 2023ರ ನಿರೀಕ್ಷೆಗಳು
ಬಜೆಟ್ 2023ರಲ್ಲಿ ರೈತರಿಗೆ ಕೇಂದ್ರ ಸರ್ಕಾರವು ಹಲವಾರು ಪ್ರಯೋಜನಕಾರಿ ಯೋಜನೆಗಳನ್ನು ಜಾರಿ ಮಾಡುವ ನಿರೀಕ್ಷೆಯಿದೆ. ಈ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರವು ರೈತರಿಗೆ ಪ್ರಯೋಜನಕಾರಿಯಾದ ಯೋಜನೆಗಳನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ವರದಿ ಪ್ರಕಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮಾಸಿಕ ಕಂತಿನ ಮೊತ್ತವನ್ನು ಏರಿಕೆ ಮಾಡುವ ನಿರೀಕ್ಷೆಯಿದೆ.
ಕಂತಿನ ಲೆಕ್ಕಾಚಾರ ಹೇಗೆ?
ಪ್ರಸ್ತುತ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಮಾಸಿಕವಾಗಿ ಎರಡು ಸಾವಿರ ರೂಪಾಯಿಯಂತೆ ವಾರ್ಷಿಕವಾಗಿ ಮೂರು ಕಂತುಗಳಲ್ಲಿ ಆರು ಸಾವಿರ ರೂಪಾಯಿಯನ್ನು ನೀಡಲಾಗುತ್ತಿದೆ. ಆದರೆ ಈ ಮೊತ್ತವನ್ನು ಎಂಟು ಸಾವಿರ ರೂಪಾಯಿಗೆ ಏರಿಕೆ ಮಾಡಬೇಕು ಎಂಬುವುದು ಬೇಡಿಕೆಯಾಗಿದೆ. ಪ್ರಸ್ತುತ 2 ಸಾವಿರದಂತೆ ಮೂರು ಕಂತುಗಳಲ್ಲಿ ಆರು ಸಾವಿರ ನೀಡಲಾಗುತ್ತಿದೆ. ಈ ಮೊತ್ತವನ್ನು ಎಂಟು ಸಾವಿರಕ್ಕೆ ಏರಿಸಿದಾಗ ನಾಲ್ಕು ಕಂತುಗಳಲ್ಲಿ ಮೊತ್ತವನ್ನು ನೀಡುವ ನಿರೀಕ್ಷೆಯಿದೆ. ಪ್ರಸ್ತುತ ನಾಲ್ಕು ತಿಂಗಳಿಗೊಮ್ಮೆ ಕಂತನ್ನು ಬಿಡುಗಡೆ ಮಾಡಲಾಗುತ್ತಿದೆ.
ಕಿಸಾನ್ ಸಮ್ಮಾನ್ ನಿಧಿಯ 13ನೇ ಕಂತು
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತು ಬಿಡುಗಡೆಯಾಗುವ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಹೊಂದಿದೆ. ಕೇಂದ್ರ ಸರ್ಕಾರವು ಶೀಘ್ರವೇ 2 ಸಾವಿರ ರೂಪಾಯಿಯ ಕಂತನ್ನು ಬಿಡುಗಡೆ ಮಾಡುವ ನಿರೀಕ್ಷೆಯನ್ನು ರೈತರು ಹೊಂದಿದ್ದಾರೆ. ಆದರೆ ಸರ್ಕಾರವು ಈವರೆಗೂ ನೋಟಿಸ್ ಅನ್ನು ಜಾರಿ ಮಾಡಿಲ್ಲ. ಜನವರಿ 23ರಂದು ಕಂತು ಬಿಡುಗಡೆ ಮಾಡುವ ನಿರೀಕ್ಷೆಯಿತ್ತು. ರೈತರು ಪೋರ್ಟಲ್ ಮೂಲಕ ಈ ಬಗ್ಗೆ ಪರಿಶೀಲನೆ ಮಾಡಬಹುದು.


Click it and Unblock the Notifications