ಮೇ 31ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11ನೇ ಕಂತನ್ನು ಈ ಯೋಜನೆಯ ಫಲಾನುಭವಿಗಳಿಗೆ ಬಿಡುಗಡೆ ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಮಾರು 10 ಕೋಟಿ ಫಲಾನುಭವಿಗಳಿಗೆ ಸುಮಾರು 21,000 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ.
ಈ ಯೋಜನೆಯಲ್ಲಿ ವಾರ್ಷಿಕವಾಗಿ ಆರು ಸಾವಿರ ಲಭ್ಯವಾಗಲಿದೆ. ಪ್ರತಿ ಕಂತಿನಲ್ಲಿ ಎರಡು ಸಾವಿರ ರೂಪಾಯಿ ಅರ್ಹ ರೈತ ಕುಟುಂಬಕ್ಕೆ ಸಿಗಲಿದೆ. ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಆಗಿರುವ ರೈತರ ಬ್ಯಾಂಕ್ ಖಾತೆಗೆ ಈ ಹಣವು ಜಮೆ ಆಗಲಿದೆ.
ಈ ಯೋಜನೆಯಲ್ಲಿ ಮೂರು ಕಂತಿನಂತೆ ಹಣವನ್ನು ಜಮೆ ಮಾಡಲಾಗುತ್ತದೆ. ಮೊದಲ ಕಂತು ಏಪ್ರಿಲ್-ಜುಲೈ ನಡುವೆ ಬಿಡುಗಡೆಯಾಗುತ್ತದೆ. ಎರಡನೇಯ ಕಂತು ಆಗಸ್ಟ್-ನವೆಂಬರ್ ನಡುವೆ ಬಿಡುಗಡೆಯಾಗಲಿದೆ. ಮೂರನೇ ಕಂತು ಡಿಸೆಂಬರ್ ಮಾರ್ಚ್ ನಡುವೆ ಬಿಡುಗಡೆಯಾಗಲಿದೆ. ಹಾಗಾದರೆ ಈ ಯೋಜನೆಗೆ ಯಾರೆಲ್ಲ ಅರ್ಹರು, ಸಣ್ಣ ರೈತ ಕುಟುಂಬ ಮಾತ್ರ ಅರ್ಹರೇ ಎಂಬ ಬಗ್ಗೆ ತಿಳಿಯೋಣ ಮುಂದೆ ಓದಿ....
ಸಣ್ಣ ರೈತ ಕುಟುಂಬಕ್ಕೆ ಮಾತ್ರ ಹಣ ಲಭ್ಯವಾಗುತ್ತದೆಯೇ?
2019ರ ಫೆಬ್ರವರಿಯಲ್ಲಿ ಪಿಎಂ ಕಿಸಾನ್ ಯೋಜನೆ ಆರಂಭವಾದಾಗ ಸಣ್ಣ ರೈತ ಕುಟುಂಬ ಅಂದರೆ ಕಡಿಮೆ ಜಮೀನು ಹೊಂದಿರುವವರಿಗೆ ಮಾತ್ರವೇ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗಿತ್ತು. ಸುಮಾರು ಎರಡು ಎಕರೆಯಷ್ಟು ಜಮೀನು ಹೊಂದಿರುವವರು ಈ ಯೋಜನೆಯ ಲಾಭ ಪಡೆಯುತ್ತಿದ್ದರು. ಆದರೆ ಬಳಿಕ 2019ರ ಜೂನ್ ತಿಂಗಳಿನಲ್ಲಿ ಈ ಯೋಜನೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಈಗ ಎಷ್ಟು ಎಕರೆ ಜಮೀನು ಇದ್ದರೂ ಕೂಡಾ ಈ ಯೋಜನೆಯ ಫಲವನ್ನು ಪಡೆಯಲು ಸಾಧ್ಯವಾಗುತ್ತದೆ.
ಯಾರಿಗೆ ಹಣ ಲಭ್ಯವಾಗಲ್ಲ?
ಸಾಂಸ್ಥಿಕ ಭೂಮಿ ಹೊಂದಿರುವವರು, ಪ್ರಸ್ತುತ ಕಾರ್ಯನಿರ್ವಹಣೆ ಮಾಡುತ್ತಿರುವ ಅಥವಾ ನಿವೃತ್ತಿ ಹೊಂದಿರುವ ಅಧಿಕಾರಿಗಳು, ರಾಜ್ಯ ಅಥವಾ ಕೇಂದ್ರ ಸರ್ಕಾರದ ಉದ್ಯೋಗಿಗಳು, ಸರ್ಕಾರಿ ಸ್ವಾಯತ್ತ ಸಂಸ್ಥೆಗಳಿಗೆ, ವೈದ್ಯರು, ಇಂಜಿನಿಯರ್‌ಗಳು ಮತ್ತು ವಕೀಲರಂತಹ ವೃತ್ತಿಪರರು, 10,000 ರೂ.ಗಿಂತ ಹೆಚ್ಚಿನ ಮಾಸಿಕ ಪಿಂಚಣಿ ಹೊಂದಿರುವ ನಿವೃತ್ತ ಪಿಂಚಣಿದಾರರು, ಕಳೆದ ಮೌಲ್ಯಮಾಪನ ವರ್ಷದಲ್ಲಿ ಆದಾಯ ತೆರಿಗೆ ಪಾವತಿಸಿದವರು ಸಹ ಪ್ರಯೋಜನಗಳಿಗೆ ಅರ್ಹರಲ್ಲ.
ಹಣ ಬಂದಿದೆಯೇ ನೋಡಿ
* ಮೊದಲು PM ಕಿಸಾನ್ ವೆಬ್‌ಸೈಟ್‌ಗೆ ಭೇಟಿ ನೀಡಿ
* ಬಳಿಕ Farmers Corner ಮೇಲೆ ಕ್ಲಿಕ್ ಮಾಡಿ
* ನಂತರ Beneficiary Status ಮೇಲೆ ಕ್ಲಿಕ್ ಮಾಡಿ
* ನಂತರದ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ
* ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ


Click it and Unblock the Notifications