ಕಾಂಗ್ರೆಸ್ ಚುನಾವಣೆಗೂ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಆ ಯೋಜನೆಗಳಲ್ಲಿ ಈಗ ಒಟ್ಟಾಗಿ ನಾಲ್ಕು ಯೋಜನೆಗಳನ್ನು ಅಧಿಕಾರಕ್ಕೆ ಬಂದ ಬಳಿಕ ಜಾರಿ ಮಾಡಿದೆ. ಇನ್ನೂ ಒಂದು ಯೋಜನೆಯು ಇನ್ನಷ್ಟೇ ಜಾರಿಯಾಗಬೇಕಾಗಿದೆ.
ಈ ಐದು ಯೋಜನೆಗಳಲ್ಲಿ 3 ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ಪ್ರಮುಖವಾಗಿ ಒತ್ತು ನೀಡುವ, ಮಹಿಳೆಯರಿಗೆ ಸಹಾಯ ಮಾಡುವ ಯೋಜನೆಯಾಗಿದೆ. ಈ ಪೈಕಿ ಗೃಹ ಲಕ್ಷ್ಮೀ ಯೋಜನೆಯಲ್ಲಿ ನೀವು ಮಾಸಿಕವಾಗಿ 2000 ರೂಪಾಯಿ ಪಡೆಯಬಹುದಾಗಿದೆ. ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದರೂ ಇನ್ನೂ ನಿಮಗೆ ಮೊತ್ತ ಜಮೆಯಾಗಿಲ್ಲವೇ?, ಯಾಕೆ ಎಂದು ಇಲ್ಲಿದೆ ವಿವರ ಮುಂದೆ ಓದಿ.....

ಈ ಯೋಜನೆಯಲ್ಲಿ ಹಣ ಜಮೆಯಾಗಿಲ್ಲವೇಕೆ?
ಈ ಯೋಜನೆಯಲ್ಲಿ 9,44,155 ಅರ್ಜಿದಾರರಿಗೆ ಹಣ ಜಮೆಯಾಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರಣವನ್ನು ತಿಳಿಸಿದ್ದಾರೆ. 3082 ಅರ್ಜಿದಾರರು ಮರಣ ಹೊಂದಿದ್ದಾರೆ. ಆದ್ದರಿಂದಾಗಿ ಅನರ್ಹರಾಗಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಇನ್ನು 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಿರುವ ಕಾರಣದಿಂದಾಗಿಯೂ ಹಣ ಜಮೆಯಾಗಿಲ್ಲ. ಈ ಖಾತೆಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ. ಇನ್ನು 5,96,268 ಫಲಾನುಭವಿಗಳ ಖಾತೆಗೆ ಆಧಾರ್ ಲಿಂಕ್ ಆಗಿಲ್ಲ ಎಂದು ಹೇಳಿದರು.
2,17,536 ಫಲಾನುಭವಿಗಳ ಬ್ಯಾಂಕ್ ಖಾತೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ. 1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಬ್ಯಾಂಕ್‌ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ದತ್ತಾಂಶಗಳಿಂದ ಉಂಟಾದ ವಿಳಂಬವನ್ನು ಸೇವಾಸಿಂಧು ವತಿಯಿಂದ ಪುನರ್ ಪರಿಶೀಲಿಸಲಾಗುತ್ತಿದೆ. 1.8 ಕೋಟಿ ಅರ್ಹ ಫಲಾನುಭವಿಗಳಿಗೆ 2169 ಕೋಟಿ ರೂಪಾಯಿ ಅನುದಾನವನ್ನು ಸರ್ಕಾರ ಬಿಡುಗಡೆಗೊಳಿಸಿದೆ ಎಂದು ಹೇಳಿದರು.
ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2280 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 4 ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂಪಾಯಿಯನ್ನು ಯಶಸ್ವಿಯಾಗಿ ವರ್ಗಾವಣೆ ಮಾಡಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.


Click it and Unblock the Notifications